ಮಡಿಕೇರಿ ಮೇ 17 : ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದೆ ಎನ್ನುವ ಕಾರಣಕ್ಕೆ ಮುಸ್ಲಿಂ ಯುವ ಸಮೂಹ ಯಾವುದೇ ಕಾರಣಕ್ಕೂ ಉದ್ವೇಗ ಮತ್ತು ಪ್ರಚೋದನೆಗೆ ಒಳಗಾಗಬಾರದು. ಈ ನಾಡಿನ ಕಾನೂನನ್ನು ಗೌರವಿಸುವ ಮೂಲಕ ಶಾಂತಿಯನ್ನು ಕಾಪಾಡಬೇಕು,ಅಪಪ್ರಚಾರ ಮಾಡುವವರಿಗೆ ಆಹಾರವಾಗಬಾರದು ಎಂದು ಟಿ.ಎಂ.ಶಾಹಿದ್ ಮನವಿ ಮಾಡಿದರು.
ಮುಸ್ಲಿಂ ಧ್ವಜವನ್ನು ಹಾರಿಸಿದರೆ ಪಾಕಿಸ್ತಾನದ ಧ್ವಜವೆಂದು ಅಪಪ್ರಚಾರ ಮಾಡುತ್ತಿದ್ದಾರೆ. ಜನರ ಹಾದಿ ತಪ್ಪಿಸಲು ಮತ್ತು ಅಶಾಂತಿಯನ್ನು ಮೂಡಿಸಲು ಈ ರೀತಿಯ ಅಪಪ್ರಚಾರಗಳು ಆರಂಭಗೊಂಡಿದೆ. ಆದ್ದರಿಂದ ರಾಜ್ಯದ ಮುಸಲ್ಮಾನರು ಹಾಗೂ ಕ್ರೈಸ್ತರು ಜಾಗೃತಗೊಳ್ಳಬೇಕು. ಪ್ರಚೋದನೆ ಮತ್ತು ಆಮಿಷಗಳಿಗೆ ಒಳಗಾಗಬಾರದು, ಯಾವುದೇ ಅನ್ಯಾಯ ಅಥವಾ ಗೊಂದಲಗಳಾದಲ್ಲಿ ಶಾಸಕರುಗಳ ಗಮನಕ್ಕೆ ತರುವ ಪ್ರಯತ್ನ ಮಾಡಿ. ಕಾನೂನನ್ನು ಕೈಗೆತ್ತಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಬೇಡಿ ಎಂದು ಮನವಿ ಮಾಡಿದರು.
ಎಲ್ಲಾ ಸಮುದಾಯದಲ್ಲೂ ಕೆಲವರು ಕೋಮುವಾದಿಗಳಿದ್ದಾರೆ, ಯಾವುದೇ ಸಮುದಾಯ ಅಥವಾ ಸಂಘಟನೆ ಇರಲಿ. ಕಾನೂನು ಮೀರಿ ವರ್ತಿಸಿದರೆ ನೂತನ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಮುಂಬರುವ ಜಿ.ಪಂ, ತಾ.ಪಂ ಮತ್ತು ಲೋಕಸಭಾ ಚುನಾವಣೆ ಸಂದರ್ಭ ಕೋಮು ಭಾವನೆ ಕೆರಳಿಸಿ ಮತಗಳಿಸುವ ಸಾಧ್ಯತೆಗಳಿದೆ. ಆದ್ದರಿಂದ ಅಲ್ಪಸಂಖ್ಯಾತರು ಮಾತ್ರವಲ್ಲದೆ ಎಲ್ಲಾ ಧರ್ಮೀಯರು ಜಾಗೃತರಾಗಬೇಕೆಂದು ಶಾಹಿದ್ ತಿಳಿಸಿದರು.
Breaking News
- *ಎಂ.ಎಂ.ಸುಪ್ರಿತಾಗೆ ಚಿನ್ನದ ಪದಕ*
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*
- *ಕಳೆದು ಹೋಗಿದೆ*
- *ಫೆ.27 ಮತ್ತು 28 ರಂದು ಕೊಡವ ಬಲ್ಯನಮ್ಮೆ : ವಿವಿಧ ಸ್ಪರ್ಧೆಗಳಿಗೆ ಆಹ್ವಾನ*
- *ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*