ಮಡಿಕೇರಿ ಮೇ 17 : ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು ಮಡಿಕೇರಿ-ಕುಟ್ಟ ರಸ್ತೆಯ 8.30 ಕಿ.ಮೀ.ನಿಂದ 10 ಕಿ.ಮೀ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡು ಕಾಂಕ್ರೀಟ್ ರಸ್ತೆ ನಿರ್ಮಿಸುವ ನಿಟ್ಟಿನಲ್ಲಿ ಪ್ರಯಾಣಿಕರ ಮತ್ತು ಸಾರ್ವಜನಿಕರ ಸಂಚಾರದ ಹಿತದೃಷ್ಟಿಯಿಂದ ಸೋಮವಾರಪೇಟೆ ತಾಲ್ಲೂಕು ಮಡಿಕೇರಿ-ಕುಟ್ಟ ರಸ್ತೆಯ 8.30 ಕಿ.ಮೀ.ನಿಂದ 10 ಕಿ.ಮೀ.ವರೆಗಿನ ರಸ್ತೆಯಲ್ಲಿ ಮೇ, 22 ರಿಂದ ಜುಲೈ, 10 ರವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರು ಬದಲಿ ರಸ್ತೆಯಾದ ಮಡಿಕೇರಿ-ಸುಂಟಿಕೊಪ್ಪ-ಚೆಟ್ಟಳ್ಳಿ ಮಾರ್ಗವನ್ನು ಬಳಸುವುದು. ಈ ಬಗ್ಗೆ ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 116 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮಗಳು 1989 ರ (ತಿದ್ದುಪಡಿ ನಿಯಮಗಳು 1990) ನಿಯಮ 221 ಎ (2) ರಂತೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕವನ್ನು ಅಳವಡಿಸಲು ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಕಾರ್ಯಪಾಲಕ ಎಂಜಿನಿಯರ್, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ಕೊಡಗು ವಿಭಾಗ ಮಡಿಕೇರಿ ಇವರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚನೆ ನೀಡಿದ್ದಾರೆ.
Breaking News
- *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ*
- *ಕೊಡಗು ಹಿತರಕ್ಷಣಾ ವೇದಿಕೆಯಿಂದ ಸಂಭ್ರಮದ 76ನೇ ಗಣರಾಜ್ಯೋತ್ಸವ ಆಚರಣೆ*
- *ರಾಜಾಸೀಟು ಸೊಬಗಿಗೆ ಮನಸೋತ ಉಸ್ತುವಾರಿ ಸಚಿವರು*
- *ಸಿಕ್ಕ ಸಿಕ್ಕ ವಾಹನಗಳ ಮೇಲೆ ಒಂಟಿ ಸಲಗ ದಾಳಿ*
- *ಕೊಡ್ಲಿಪೇಟೆ ನಂದಿಪುರ ಕೆರೆ ಅಭಿವೃದ್ಧಿ : ಗ್ಯಾರಂಟಿ ಯೋಜನೆಗಳ ಮೂಲಕ ಭ್ರಷ್ಟಚಾರವಿಲ್ಲದೆ ಜನರಿಗೆ ನೇರವಾಗಿ ಹಣ : ಸಚಿವ ಎನ್.ಎಸ್.ಭೋಸರಾಜು*
- *ಸಿಎನ್ಸಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಕೊಡಗು ವಿಶ್ವವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ಧಿ ಡಿಪ್ಲೊಮೋ ಕೋರ್ಸ್ ಲೋಕಾರ್ಪಣೆ : ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಬೇಕು : ಸಚಿವ ಎನ್ ಎಸ್ ಭೋಸರಾಜು ಕರೆ*
- *ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆ : ಸಮಸ್ಯೆಗಳ ಪರಿಹಾರಕ್ಕೆ ಸಚಿವ ಎನ್.ಎಸ್.ಭೋಸರಾಜು ಸೂಚನೆ*
- *ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದಿಂದ ಗುರುವಂದನಾ ಕಾರ್ಯಕ್ರಮ*
- *ಮಡಿಕೇರಿಯಲ್ಲಿ 76 ನೇ ಗಣರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ*