ಮಡಿಕೇರಿ ಮೇ.17 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಕಲಾ ವೈಭವ ಉತ್ಸವದ ಲೋಗೋವನ್ನು ಬಿಡುಗಡೆ ಮಾಡಲಾಯಿತು.
ಪ್ರಾಂಶುಪಾಲರಾದ ಮೇಜರ್ ಡಾ. ರಾಘವ.ಬಿ ಅವರು ಜೂನ್, 3 ರಂದು ನಡೆಯುವ ಕಲಾ ಉತ್ಸವ ‘ಕಲಾ ವೈಭವ’ ಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭ ಮಾತನಾಡಿದ ಪ್ರಾಂಶುಪಾಲರಾದ ಮೇಜರ್ ಡಾ.ಬಿ.ರಾಘವ ಅವರು, ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದರೆ, ಸೃಜನಶೀಲತೆ ಹೆಚ್ಚಿಸಲು ಅನುಕೂಲ ಆಗುತ್ತದೆ. ಜೊತೆಗೆ ಸ್ಪರ್ಧಾತ್ಮಕ ಯುಗದಲ್ಲಿಯೂ ಯಶಸ್ಸಿನ ಗುರಿಯತ್ತ ಸಾಗಲು ಸಹಕಾರಿಯಾಗುತ್ತದೆ ಎಂದು ಕಿವಿಮಾತು ಹೇಳಿದರು.
ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಸಂಭ್ರಮದಿಂದ ಭಾಗವಹಿಸಿದರು.