ಮಡಿಕೇರಿ ಮೇ 17 : ನಗರದ ಶ್ರೀ ಮುತ್ತಪ್ಪ ದೇವಾಲಯದ ಭಗವತಿ ದೇವಿಯ ವಾರ್ಷಿಕ ಪೊಂಗಾಲ ಉತ್ಸವವು ಮೇ 21 ರಂದು ನಡೆಯಲಿದೆ ಎಂದು ಮಹಿಳಾ ವೇದಿಕೆಯ ಸದಸ್ಯೆ ವಿಶಾಲಾಕ್ಷಿ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ಪುರಾತನ ದೇವಾಲಯಗಳಲ್ಲಿ ಒಂದಾದ ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಪಾರ್ವತಿ, ಶ್ರೀ ಸರಸ್ವತಿ, ಶ್ರೀ ಮಹಾಲಕ್ಷ್ಮಿ ಸಂಕಲ್ಪದಲ್ಲಿರುವ ಶ್ರೀ ಭಗವತಿ ದೇವಿಗೆ ಪೊಂಗಾಲ ಸೇವೆಯನ್ನು ಬೆಳಿಗ್ಗೆ 8.30ಕ್ಕೆ ನಡೆಸಲು ಉದ್ದೇಶಿಸಲಾಗಿದ್ದು, ಈ ಬಾರಿ ವಿಜೃಂಭಣೆಯಿಂದ ಉತ್ಸವ ನಡೆಸಲಾಗುವುದು. ಇದು ಕೇವಲ ಮಹಿಳೆಯರು ಮಾತ್ರ ನಡೆಸುವ ಪುಣ್ಯ ಕಾರ್ಯವಾಗಿದ್ದು, ಪೊಂಗಾಲ ಸಮರ್ಪಣೆಯಿಂದ ಮನೆಯಲ್ಲಿ ಆರೋಗ್ಯ ಶಾಂತಿ, ನೆಮ್ಮದಿ ನೆಲೆಸುವ ನಂಬಿಕೆ ಇದೆ ಎಂದರು.
ಇಟ್ಟಿಗೆ ಅಥವಾ ಕಲ್ಲುಗಳನ್ನು ಜೋಡಿಸಿ ಒಲೆಯನ್ನು ಹಾಕಿ ಸೌದೆಯನ್ನು ಜೋಡಿಸಿ ಸಿದ್ದಪಡಿಸಿದ ನಂತರ ಅರ್ಚಕರು ನೀಡಿದ ಕರ್ಪೂರದಾರತಿಯಿಂದ ಒಲೆ ಉರಿಸಿ, ಹೊಸ ಮಡಿಕೆಯಲ್ಲಿ ನೀರು ತುಂಬಿಸಿ ಪೊಂಗಾಲ ತಯಾರಿಕೆ ಮಾಡಲಾಗುತ್ತದೆ.
ಪೊಂಗಾಲ ಸೇವೆ ಮಾಡಲಿಚ್ಚಿಸುವ ಮಹಿಳೆಯರು 3 ದಿನ ಶುದ್ದಿಯಿಂದ ವ್ರತ ಮಾಡಬೇಕು. ರೂ.200 ನೀಡಿ ಮುಂಗಡ ರಶೀತಿ ಪಡೆದು ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.
ಹೆಚ್ಚಿನ ಮಾಹಿತಿಗಾಗಿ 9481488602, 9480427615, 7760919536, 8861290731 ಸಂಪರ್ಕಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಹಿಳಾ ವೇದಿಕೆಯ ಉಪಾಧ್ಯಕ್ಷೆ ದೀಪಾ, ಕಾರ್ಯದರ್ಶಿ ಗೀತಾ ಹಾಗೂ ಖಜಾಂಚಿ ರಾಣಿ ಉಪಸ್ಥಿತರಿದ್ದರು.









