ಮಡಿಕೇರಿ ಮೇ 17 : ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಸರ್ಕಾರದ ಸಮರ್ಥ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸಲು ನೂತನ ಕಾಂಗ್ರೆಸ್ ಸರ್ಕಾರ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ಪಿಗ್ಮಿ ಸಂಗ್ರಹಗಾರರ ಸಂಘ ಒತ್ತಾಯಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಎಂ.ಡಿ.ನಾಣಯ್ಯ ಅವರು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ ಅಭಿವೃದ್ಧಿಪರ ಚಿಂತನೆಯ ಉತ್ಸಾಹಿ ಶಾಸಕರು ಆಯ್ಕೆಯಾಗಿದ್ದಾರೆ, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಕೊಡಗಿನವರಿಗೆ ಸಚಿವ ಸ್ಥಾನ ನೀಡಬೇಕೆನ್ನುವ ಬೇಡಿಕೆ ದಶಕಗಳಿಂದ ಕೇಳಿ ಬಂದಿದ್ದು, ಜನರ ಮನವಿಗೆ ಈ ಸರ್ಕಾರ ಸ್ಪಂದಿಸಬೇಕು. ಖ್ಯಾತ ವಕೀಲರಾಗಿ ಹಲವು ಜಟಿಲ ಸಮಸ್ಯೆಗಳನ್ನು ಬಗೆ ಹರಿಸಿದ ಹೆಗ್ಗಳಿಕೆಯ ಪೊನ್ನಣ್ಣ ಅವರು ಕ್ಷೇತ್ರದ ಜನ ಸಾಮಾನ್ಯರ ಸಂಕಷ್ಟಗಳಿಗೆ ಚುನಾವಣೆಗೂ ಮೊದಲೇ ಸ್ಪಂದಿಸುತ್ತಾ ಬಂದಿದ್ದಾರೆ. ಇವರು ಸಚಿವರಾಗಿ ಆಯ್ಕೆಯಾದರೆ ಕೊಡಗು ಜಿಲ್ಲೆಗೆ ಮಾತ್ರವಲ್ಲದೆ ಇಡೀ ಕರ್ನಾಟಕ ರಾಜ್ಯಕ್ಕೆ ದೊಡ್ಡ ಕೊಡುಗೆ ನೀಡಿದಂತ್ತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದ್ದು, ಸಚಿವ ಸ್ಥಾನ ನೀಡಿದ್ದೇ ಆದಲ್ಲಿ ಅಭಿವೃದ್ಧಿ ಕಾರ್ಯದಲ್ಲಿ ಕೊಡಗು ಜಿಲ್ಲೆ ರಾಜ್ಯಕ್ಕೇ ಮಾದರಿಯಾಗಲಿದೆ. ಅಲ್ಲದೆ ಜಿಲ್ಲೆಯನ್ನು ಕಾಡುತ್ತಿರುವ ಮೂಲಭೂತ ಸೌಕರ್ಯದ ಕೊರತೆ, ವಸತಿ ರಹಿತರ ಸಂಕಷ್ಟ, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ವನ್ಯಜೀವಿಗಳ ಹಾವಳಿ ಸೇರಿದಂತೆ ಅನೇಕ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದು ನಾಣಯ್ಯ ಅಭಿಪ್ರಾಯಪಟ್ಟಿದ್ದಾರೆ.
Breaking News
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*
- *ವೀರ ಸೇನಾನಿಗಳಿಗೆ ಅಗೌರವ : ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆ ಖಂಡನೆ : ಆರೋಪಿಯ ಗಡಿಪಾರಿಗೆ ಆಗ್ರಹ*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶ*
- *ನ.29ರಂದು ಕೊಡಗು ಜಿಲ್ಲಾ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆಯ 12ನೇ ವಾರ್ಷಿಕ ಮಹಾಸಭೆ*