ಸೋಮವಾರಪೇಟೆ ಮೇ 17 : ಸೋಮವಾರಪೇಟೆ ತಾಲ್ಲೂಕು ಕಚೇರಿ ಹಾಗೂ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ ಅವರು ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಕಚೇರಿಯಲ್ಲಿದ್ದ ಸಾರ್ವಜನಿಕರನ್ನು ಮಾತನಾಡಿಸಿ, ಸಮಸ್ಯೆಗಳ ಬಗ್ಗೆ ವಿಚಾರಿಸಿದರು. ನಂತರ ಸಿಬ್ಬಂದಿಗಳಿಗೆ ಸಲಹೆ ನೀಡಿದರು. ಗ್ರಾಮೀಣ ಭಾಗದಿಂದ ಬಂದ ರೈತರು, ವಯಸ್ಕರು, ಮಹಿಳೆಯರು, ಕೂಲಿಕಾರ್ಮಿಕರ ಕೆಲಸಗಳನ್ನು ವಿಳಂಬ ಮಾಡದೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು. ಯುವ ನೌಕರರು ಪ್ರತಿಫಲಾಪೇಕ್ಷೆಯಿಲ್ಲದೆ ಕೆಲಸ ಮಾಡಿದರೆ, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ನಿರೀಕ್ಷಿಸಬಹುದು ಎಂದರು.
ಸರ್ಕಾರಿ ಆಸ್ಪತ್ರೆಯ ಪ್ರತಿವಿಭಾಗವನ್ನು ಪರಿಶೀಲಿಸಿದರು. ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ, ಯೋಗಕ್ಷೇಮ ವಿಚಾರಿಸಿದರು. ವೈದ್ಯರೊಂದಿಗೆ ಸಭೆ ಚರ್ಚಿಸಿದ ಶಾಸಕರು, ಆಸ್ಪತ್ರೆಗೆ ಬೇಕಾದ ಸವಲತ್ತುಗಳ ಪಟ್ಟಿಯನ್ನು ನೀಡಬೇಕೆಂದು ಆಡಳಿತ ವೈದ್ಯಾಧಿಕಾರಿಗೆ ತಿಳಿಸಿದರು. ನೂತನ ಸರ್ಕಾರ ರಚನೆಯಾದ ನಂತರ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆಗಳು ಇಲ್ಲಿಯೇ ಸಿಗುವಂತಾಗಬೇಕು. ಖಾಲಿಯಿರುವ ವೈದ್ಯರ ಹುದ್ದೆಗಳನ್ನು ಭರ್ತಿಗೆ ಅಧ್ಯತೆ ನೀಡಲಾಗುವುದು ಎಂದು ಹೇಳಿದರು.
ಈ ಸಂದರ್ಭ ತಾಲ್ಲೂಕು ತಹಸೀಲ್ದಾರ್ ಎಸ್.ಎನ್.ನರಗುಂದ, ಆಡಳಿತ ವೈದ್ಯಾಧಿಕಾರಿ ಸತೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ಹಾನಗಲ್, ಪ್ರಮುಖರಾದ ಶೀಲಾ ಡಿಸೋಜ, ಕೆ.ಎ.ಯಾಕುಬ್, ಸುಜಿತ್, ಸಿ.ಈ.ಚೇತನ್, ಎಸ್.ಎಂ.ಡಿಸಿಲ್ವಾ ಮತ್ತಿತರು ಇದ್ದರು.
Breaking News
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*