ನಾಪೋಕ್ಲು ಮೇ 17 : ನಾಪೋಕ್ಲು ವಿನಲ್ಲಿ ಬುಧವಾರ ಮಧ್ಯಾಹ್ನ ಭಾರೀ ಗಾಳಿಯೊಂದಿಗೆ ಒಂದು ಇಂಚಿಗೂ ಅಧಿಕ ಮಳೆ ಸುರಿದ ಪರಿಣಾಮ ರಸ್ತೆಯಲ್ಲಿ ಮರಗಳು, ವಿದ್ಯುತ್ ಕಂಬಗಳು ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ನಡೆದಿದೆ. ನಾಪೋಕ್ಲು ಪಟ್ಟಣದ ಮಾರುಕಟ್ಟೆ ಬಳಿಯ ಪೊಲೀಸ್ ಠಾಣೆಯ ಮುಂಭಾಗದ ರಸ್ತೆಯಲ್ಲಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಅದರಂತೆ ನಾಪೋಕ್ಲು ಭಾಗಮಂಡಲ ಮುಖ್ಯರಸ್ತೆಯ ಹಳೇತಾಲ್ಲೂಕುವಿನಲ್ಲಿ ತೆಂಗಿನ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಸ್ಥಳೀಯ ನಿವಾಸಿ ಅಜ್ಜೇಟ್ಟಿರ ರಾಜ ಎಂಬುವವರ ಟಯರ್ ಅಂಗಡಿ ಮಳಿಗೆಯ ಮೇಲೆ ಬಿದ್ದುನಷ್ಟ ಸಂಭವಿಸಿದೆ. ಇದೇ ಮಳಿಗೆಯ ಮುಂಭಾಗದಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ಮಂಗಳೂರಿನಿಂದ ಭಾಗಮಂಡಳಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಕುಟುಂಬವೊಂದು ನಿಂತಿದ್ದ ಸಂದರ್ಭ ಟಯರ್ ಮಳಿಗೆಯ ಮೇಲೆ ತೆಂಗಿನ ಮರ ಬಿದ್ದಿದ್ದು ಕುಟುಂಬವು ಅದೃಷ್ಟವವಶಾತ್ ಅಪಾಯದಿಂದ ಪಾರಾಗಿದೆ. ಗಾಳಿ ಮಳೆಯಿಂದ ವಿವಿಧೆಡೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ನಾಪೋಕ್ಲು ವ್ಯಾಪ್ತಿಯಲ್ಲಿ ವಿದ್ಯುತ್ ವ್ಯಥೆಯ ಉಂಟಾಗಿದೆ. ಎರಡು ಕಡೆಗಳಲ್ಲಿ ಒಂದೇ ಸಮಯಕ್ಕೆ ರಸ್ತೆಗೆ ಅಡ್ಡಲಾಗಿ ಮರ ಬಿದ್ದಪರಿಣಾಮ ಕೆಲಕಾಲ ನಾಪೋಕ್ಲು ಮುಖ್ಯ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳಕ್ಕೆ ನಾಪೋಕ್ಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ,ಸದಸ್ಯ ಅರುಣ್ ಬೇಬ, ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಹಾಗೂ ಸಿಬ್ಬಂದಿಗಳು, ನಾಪೋಕ್ಲು ಸೆಸ್ಕ್ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಸಾರ್ವಜನಿಕರ ಸಹಕಾರದೊಂದಿಗೆ ರಸ್ತೆಯಲ್ಲಿದ್ದ ಮರಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಲ್ಲಿ ಯಶಸ್ವಿಯಾದರು.
Breaking News
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*