ಮಡಿಕೇರಿ ಮೇ 18 : ಎಸ್‌ವೈಎಸ್ ಕೊಡಗು ಜಿಲ್ಲಾ ಸಮಿತಿಯಿಂದ ಸುಸಜ್ಜಿತವಾಗಿ ನವೀಕರಿಸಲ್ಪಟ್ಟ ಸಿದ್ದಾಪುರದ ವರಕ್ಕಲ್ ಸಮಸ್ತ ಭವನ, ಖಾಝಿ ಹೌಸ್ ಹಾಗೂ ಸಂಸ್ಥೆಯ ಕೇಂದ್ರ ಸಮಿತಿಯ ಅಮೃತ ಮಹೋತ್ಸವದ ಪ್ರಯುಕ್ತ ಆಯೋಜಿತ ಜಾಗೃತಿ ಯಾತ್ರೆಯ ಉದ್ಘಾಟನಾ ಸಮಾವೇಶ ಮೇ 21 ರಂದು ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಎಸ್‌ವೈಎಸ್ ಕೊಡಗು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ವೈ.ಅಶ್ರಫ್ ಫೈಝಿ ಮಾತನಾಡಿ, ಅಂದು ಸಂಜೆ ಸಿದ್ದಾಪುರದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸಮಸ್ತ ಕೇಂದ್ರ ಮುಶಾವರ ಸದಸ್ಯ ಎಂ.ಎಂ.ಅಬ್ದುಲ್ಲಾ ಫೈಝಿ ಧಜ್ವಾರೋಹಣದ ಮೂಲಕ ಚಾಲನೆ ನೀಡಲಿದ್ದಾರೆ. ವರಕ್ಕಲ್ ಭವನ ಹಾಗೂ ಖಾಝಿ ಹೌಸ್‌ನ್ನು ಸಮಸ್ತ ಕೇಂದ್ರ ಜಂ-ಇಯ್ಯತುಲ್ ಉಲಮಾ ಅಧ್ಯಕ್ಷ ಸಯ್ಯಿದುಲ್ ಉಲಮಾ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕ್ಕೋಯ ತಂಙಳ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಎಸ್.ವೈ.ಎಸ್ ಜಿಲ್ಲಾಧ್ಯಕ್ಷ ಜನಾಬ್ ಸಿ.ಪಿ.ಎಂ.ಬಶೀರ್ ಹಾಜಿ ವಹಿಸಲಿದ್ದಾರೆಂದರು.
ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮರಾ ನಾಯಕರು ಪಾಲ್ಗೊಳ್ಳಲಿದ್ದು, ಸಮಸ್ತ ಕೇಂದ್ರ ಮುಶಾವರ ಸದಸ್ಯ ಎಂ.ಎ.ಅಬ್ದುಲ್ಲಾ ಫೈಝಿ ಉಸ್ತಾದ್, ಎಸ್‌ಕೆಜೆಎಂಸಿಸಿ ಕೇಂದ್ರ ಸಮಿತಿ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಮುಸ್ಲಿಯಾರ್, ಕೊಡಗು ಜಿಲ್ಲಾ ಜಂ-ಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಎ.ಸಿ.ಉಸ್ಮಾನ್ ಫೈಝಿ ಉಸ್ತಾದ್ ಅನುಗ್ರಹ ಭಾಷಣ ಮಾಡಲಿದ್ದಾರೆಂದು ತಿಳಿಸಿದರು.
ಎಸ್.ವೈಎಸ್. ಸಂಘಟನೆಯ 70ನೇ ವಾರ್ಷಿಕೋತ್ಸವದ ಅಂಗವಾಗಿ ಕೊಡಗಿನಿಂದ ತಿರುವನಂತಪುರದವರೆಗೆ ನಡೆಯಲಿರುವ ಜಾಗೃತಿ ಯಾತ್ರೆಯ ಉದ್ಘಾಟನಾ ಸಮಾವೇಶ ನಡೆಯಲಿದ್ದು, ಅಧ್ಯಕ್ಷತೆಯನ್ನು ಎಸ್‌ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಯ್ಯದ್ ಮುಹಮ್ಮದ್ ಪೂಕೋಯಾ ಜಮಲುಲ್ಲೆöÊಲಿ ತಂಙಳ್ ವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಎಸ್‌ವೈಎಸ್ ಜಿಲ್ಲಾಧ್ಯಕ್ಷ ಸಿ.ಪಿ.ಎಂ ಬಶೀರ್ ಹಾಜಿ, ಕೋಶಾಧಿಕಾರಿ ವೈ.ಎಂ.ಉಮರ್ ಫೈಝಿ, ಕಾರ್ಯದರ್ಶಿಗಳಾದ ಇಕ್ಬಾಲ್ ಮುಸ್ಲಿಯಾರ್, ಎಂ.ಎA.ಎಸ್.ಹುಸೈನ್, ಹಂಝ ಉಪಸ್ಥಿತರಿದ್ದರು.









