ಮಡಿಕೇರಿ ಮೇ 18 : ಜಿಲ್ಲೆಯ ಹಲವೆಡೆ ಇಂದು ಸಂಜೆ ಭಾರೀ ಗಾಳಿ ಮಳೆಯಾಗಿದ್ದು, ಸುಂಟಿಕೊಪ್ಪದಲ್ಲಿ ಬೃಹತ್ ಮರವೊಂದು ಮನೆಯ ಮೇಲಕ್ಕೆ ಬಿದ್ದ ಘಟನೆ ನಡೆದಿದೆ. ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಂಟಿಕೊಪ್ಪ ನಾಡಕಚೇರಿ ಹಿಂಭಾಗದಲ್ಲಿನ ಲೋಕೋಪಯೋಗಿ ಇಲಾಖಾ ವಸತಿ ಗೃಹದಲ್ಲಿ ಮುಕ್ತಾರ್ ಎಂಬವರು ವಾಸವಿದ್ದು, ಗಾಳಿ ಮಳೆಯ ಸಂದರ್ಭ ಮಾವಿನ ಮರ ಮನೆಯ ಮೇಲೆ ಉರುಳಿ ಬಿದ್ದಿದೆ. ಮನೆಯಲ್ಲಿದ್ದ ನಾಲ್ವರು ಮಕ್ಕಳು ಸೇರಿದಂತೆ ಆರು ಮಂದಿ ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಗ್ರಾಮ ಪಂಚಾಯ್ತಿ ಸಿಬ್ಬಂದಿಗಳು ಹಾಗೂ ಸುಂಟಿಕೊಪ್ಪ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ, ಮರ ತೆರವಿಗೆ ಅಗತ್ಯ ಕ್ರಮ ಕೈಗೊಂಡಿದ್ದಾರೆ.









