ಮಡಿಕೇರಿ ಮೇ.18 : ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ಅಧ್ಯಕ್ಷರಾದ ಟಿ.ಎಂ.ವಿಜಯ ಭಾಸ್ಕರ್ ಮತ್ತು ಸಲಹೆಗಾರ ಪ್ರಸನ್ನ ಕುಮಾರ್ ನಗರದ ಅರಣ್ಯ ಭವನ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕøತಿ ಹಾಗೂ ಅಬಕಾರಿ ಇಲಾಖೆಗಳಲ್ಲಿ ಆಡಳಿತ ಸುಧಾರಣೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.
ನಗರದ ಅರಣ್ಯ ಭವನದಲ್ಲಿ ಅರಣ್ಯ ಇಲಾಖೆಯಲ್ಲಿ ಆಡಳಿತ ಸುಧಾರಣೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್.ಮೂರ್ತಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಮೊಹಿಸಿನ್ ಭಾಷಾ, ಶ್ರೀನಿವಾಸ್ ನಾಯಕ್, ವೃತ್ತ ಅರಣ್ಯ ಅಧಿಕಾರಿ ಹನುಮಂತ ರಾಜು ಹಾಗೂ ಇತರರು ಹಲವು ಮಾಹಿತಿ ನೀಡಿದರು.
ಪ್ರವಾಸೋದ್ಯಮ ಇಲಾಖೆಗೆ ಭೇಟಿ ನೀಡಿ ಪ್ರವಾಸೋದ್ಯಮ ಇಲಾಖೆಯ ಕಾರ್ಯಚಟುವಟಿಕೆ ಮತ್ತು ಆಡಳಿತ ಸುಧಾರಣೆ ಬಗ್ಗೆ ಮಾಹಿತಿ ಪಡೆದರು. ಹಾಗೆಯೇ ಅಬಕಾರಿ ಇಲಾಖೆಗೆ ಭೇಟಿ ನೀಡಿ ಆಡಳಿತ ಸುಧಾರಣೆ ಸಂಬಂಧಿಸಿದಂತೆ ಅಬಕಾರಿ ಉಪ ಆಯುಕ್ತರಾದ ಜಗದೀಶ ನಾಯ್ಕ್ ಅವರಿಂದ ಮಾಹಿತಿ ಪಡೆದರು.









