ಮಡಿಕೇರಿ ಮೇ 18 : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ 4ನೇ ಅಂಗವಾಗಿರುವ ಪತ್ರಿಕಾರಂಗ ಸಮಾಜದ ಕೈಗನ್ನಡಿಯಂತೆ ಕಾರ್ಯನಿರ್ವಹಿಸುವ ದಿಟ್ಟತನವನ್ನು ಹೊಂದಿದೆ. ಪತ್ರಕರ್ತರಾದವರಿಗೆ ವಿವೇಚನಾ ಶಕ್ತಿಯ ಅಗತ್ಯವಿದೆ ಎಂದು ಕೊಡಗು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಅಶೋಕ್ ಸಂಗಪ್ಪ ಅಭಿಪ್ರಾಯಪಟ್ಟಿದ್ದಾರೆ.
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ರಚಿತ “ಸೊಡರು” ಪುಸ್ತಕ ವಿಮರ್ಶೆ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಕರ್ತರಿಗೆ ಭಾಷಾ ಕೌಶಲ್ಯ, ವಿಷಯದ ಆಳವಾದ ಜ್ಞಾನ, ಅಧ್ಯಯನ, ವಿಷಯವನ್ನು ವಿಶ್ಲೇಷಿಸುವ ಅರಿವು ಇರಬೇಕು, ವಿವೇಚನಾತ್ಮಕ ಶಕ್ತಿಯನ್ನು ಹೊಂದಿರಬೇಕು ಮತ್ತು ಸನ್ನಿವೇಶದ ಗಾಂಭೀರ್ಯತೆ ತಿಳಿದಿರಬೇಕು ಎಂದರು.
ವಿದ್ಯಾರ್ಥಿಗಳಿಗಾಗಿ ಪತ್ರಿಕೋದ್ಯಮದ ಬಗ್ಗೆ ಕಾರ್ಯಾಗಾರ ಮತ್ತು ಸಮಾಜದ ಅಂಕು ಡೊಂಕುಗಳನ್ನು ಸರಿಪಡಿಸುವ ಕುರಿತು ಹಿರಿಯರ ಮಾರ್ಗದರ್ಶನದಲ್ಲಿ ಚಿಂತನ-ಮಂಥನ ಕಾರ್ಯಕ್ರಮ ನಡೆಸುವುದಾಗಿ ತಿಳಿಸಿದರು.
ಸೊಡರು ಎಂದರೆ ದೀಪ ಎಂದರ್ಥ, ಸೊಡರು ಎಂಬ ಜ್ಞಾನದ ಜ್ಯೋತಿಯ ಮೂಲಕ ನಮ್ಮಲ್ಲಿರುವ ಅಜ್ಞಾನವನ್ನು ತೊಡೆದು ಹಾಕಬೇಕು. ಸತ್ಯವನ್ನು ಎಂದೂ ಅಸತ್ಯ ಎಂದು ಹೇಳಲು ಸಾಧ್ಯವಿಲ್ಲ. ಜೀವನದಲ್ಲಿ ಸತ್ಯವನ್ನು ಮರೆಮಾಚುವ ಪ್ರಯತ್ನ ಮಾಡಬಾರದು. ಸತ್ಯ ಎಂಬುವುದು ಅತ್ಯಂತ ಪವಿತ್ರವಾದ ದಾರಿ ಎಂದು ಪ್ರೊ.ಅಶೋಕ್ ಸಂಗಪ್ಪ ತಿಳಿಸಿದರು.
ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಮಾತನಾಡಿ, ಸೊಡರು ಪುಸ್ತಕ ಮಾರ್ಗದರ್ಶಿ ಕೈಪಿಡಿಯಂತಿದೆ, ನೈಜ ಅನುಭವವನ್ನು ವಿವರಿಸಲಾಗಿದೆ, ವಿದ್ಯಾರ್ಥಿಗಳು ಓದುವ ಅಗತ್ಯವಿದೆ ಎಂದರು.
ಯಾವುದೇ ಪರಿಸ್ಥಿತಿಯಲ್ಲೂ ಪತ್ರಕರ್ತರು ಎದೆಗುಂದದೆ ಮುನ್ನಗ್ಗಿ ಕಾರ್ಯ ನಿರ್ವಹಿಸುವಂತಿರಬೇಕು. ಸತ್ಯಕ್ಕೆ ಸಮೀಪದ ವರದಿಗಳನ್ನು ಮಾಡಬೇಕು, ನೀಡುವ ಸುದ್ದಿ ಸಂಶಯಾಸ್ಪದವಾಗಿರಬಾರದು. ಪತ್ರಕರ್ತರು ಜನರು ಹಾಗೂ ಆಡಳಿತ ವ್ಯವಸ್ಥೆಯ ನಡುವೆ ಸೇತುವೆಯಿದ್ದಂತೆ, ಆದ್ದರಿಂದ ಅತಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಹಾಗೂ ಸೊಡರು ಪುಸ್ತಕದ ಲೇಖಕ ಬಿ.ಜಿ.ಅನಂತಶಯನ ಮಾತನಾಡಿ, ಬ್ರಿಟಿಷ್ ಸಾಮ್ರಾಜ್ಯದ ದುರಾಡಳಿತವನ್ನು ಜನತೆಗೆ ಮುಟ್ಟಿಸುವ ಮೂಲಕ ಸ್ವಾತಂತ್ರö್ಯ ಪಡೆಯುವ ನಿಟ್ಟಿನಲ್ಲಿ ಅಂದು ಪತ್ರಿಕೋದ್ಯಮ ಹುಟ್ಟಿಕೊಂಡಿತು. ಆದರೆ ಸ್ವಾತಂತ್ರ್ಯ ನಂತರ ಪತ್ರಿಕೋದ್ಯಮ ತನ್ನ ಮೂಲ ಉದ್ದೇಶವನ್ನೇ ಮರೆತು ಹೋಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಪತ್ರಕರ್ತರಾಗಲು ಪ್ರಯತ್ನಿಸಬೇಕು. ಪತ್ರಿಕೋದ್ಯಮ ಸವಾಲಿನ ಕೆಲಸವಾಗಿದ್ದು, ಪತ್ರಕರ್ತನಿಗೆ ಸಮಯಪಾಲನೆ ಬಹಳ ಮುಖ್ಯ. ಸೊಡರು ಪುಸ್ತಕದಲ್ಲಿ ಪತ್ರಿಕೋದ್ಯಮದ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ ಎಂದು ಪತ್ರಿಕೋದ್ಯಮದಲ್ಲಿ ಬರುವ ಸವಾಲುಗಳ ಕುರಿತು ಅವರು ವಿವರಿಸಿದರು.
ಕಾಲೇಜು ಪ್ರಾಂಶುಪಾಲ ಡಾ.ಮೇಜರ್ ರಾಘವ ಬಿ. ಪ್ರಾಸ್ತವಿಕವಾಗಿ ಮಾತನಾಡಿ, ಪತ್ರಕರ್ತರು ಸಾಕಷ್ಟು ಏಳು ಬೀಳುಗಳ ನಡುವೆ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಒಂದು ದೋಣಿ ಮುಂದೆ ಸಾಗಲು ನಾವಿಕ ಹೇಗೆ ಮುಖ್ಯವೋ ಅದೇ ರೀತಿ ಸಮಾಜದ ಅಂಕುಡೊಂಕುಗಳನ್ನು ತಿದ್ದಲು ಪತ್ರಕರ್ತರು ಮುಖ್ಯ. “ಸೊಡರು” ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕೃತಿಯಾಗಿದೆ ಎಂದು ಶ್ಲಾಘಿಸಿದರು.
ವಿದ್ಯಾರ್ಥಿ ಕೃತಿಕ ನಿರೂಪಿಸಿ, ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹಾಗೂ ಪತ್ರಿಕೋದ್ಯಮ ವಿಭಾಗದ ಸಂAಯೋಜಕಿ ಡಾ.ನಯನಾ ಕಶ್ಯಪ್ ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ “ಸೊಡರು” ಪುಸ್ತಕವನ್ನು ಉಚಿತವಾಗಿ ವಿತರಿಸಲಾಯಿತು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*