ಮಡಿಕೇರಿ ಮೇ 18 : ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಅಪೂರ್ಣಗೊಂಡ ಕಾಮಗಾರಿಗಳಿಗೆ ‘ಬಿಲ್’ ಮಾಡುವ ಪ್ರಯತ್ನಗಳು ನಡೆಯುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಅಪೂರ್ಣ ಕಾಮಗಾರಿಗಳಿಗೆ ಬಿಲ್ ಮಾಡಬಾರದು. ಒಂದು ವೇಳೆ ನಿಯಮ ಮೀರಿ ಇಂತಹ ಕಾರ್ಯಕ್ಕೆ ಕೈಹಾಕಿದರೆ ತಪ್ಪಿತಸ್ಥ ಅಧಿಕಾರಿಗಳ ತಲೆದಂಡ ಖಚಿತವೆಂದು ತಿಳಿಸಿದರು.
ಮಡಿಕೇರಿಯ ಜಿಲ್ಲಾಡಳಿತ ಭವನದ ತಡೆಗೋಡೆಯ ಕಾಮಗಾರಿ ಅಪೂರ್ಣಗೊಂಡಿದೆ. ಪ್ರಸಕ್ತ ಸಾಲಿನ ಮುಂಗಾರು ಜೂನ್ ಎರಡನೇ ವಾರದಲ್ಲಿ ಆರಂಭವಾಗುವ ಸಾಧ್ಯತೆ ಇದೆ. ಹೀಗಿದ್ದೂ ಇಲ್ಲಿಯವರೆಗೂ ಇದರ ದುರಸ್ತಿ ಕಾರ್ಯ ಪೂರ್ಣವಾಗಿಲ್ಲ, ಮಳೆೆಗಾಲದಲ್ಲಿ ಮತ್ತೆ ಈ ತಡೆಗೋಡೆಯ ಭಾಗ ಕುಸಿಯುವ ಸಾಧ್ಯತೆ ಇದೆ ಆತಂಕ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿ, ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತ ಭವನದ ತಡೆಗೋಡೆ ಕೆಳಭಾಗದಲ್ಲಿರುವ ಮಡಿಕೇರಿ-ಮಂಗಳುರು ರಸ್ತೆಯ ಸಂಚಾರವನ್ನು ಮುಂಗಾರಿನ ಆಗಸ್ಟ್ ಅಂತ್ಯದವರೆಗೆ ಬಂದ್ ಮಾಡಬೇಕೆಂದು ಮೈನಾ ಒತ್ತಾಯಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವಿನೊಂದಿಗೆ ಸರ್ಕಾರ ರಚಿಸುತ್ತಿದೆ. ಕೊಡಗಿನ ಎರಡು ಕ್ಷೇತ್ರಗಳಲ್ಲಿ ಆಯ್ಕೆಯಾಗಿರುವ ಡಾ.ಮಂಥರ್ ಗೌಡ ಮತ್ತು ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು, ಅದಕ್ಕೆ ಇಲ್ಲಿನ ಶಾಸಕರು ಅರ್ಹರಾಗಿದ್ದಾರೆ ಎಂದು ಅವರು ಹೇಳಿದರು.
ನಗರ ಕಾಂಗ್ರೆಸ್ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ ಮಾತನಾಡಿ, ಶಾಸಕರ ಸಹಕಾರ ಪಡೆದು ಮಡಿಕೇರಿ ನಗರಸಭೆಗೆ ಹೆಚ್ಚಿನ ಅನುದಾನ ತರಿಸುವ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇದಕ್ಕೆ ನಗರಸಭಾ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಕೈಜೋಡಿಸಬೇಕೆಂದು ಮನವಿ ಮಾಡಿದರು.
ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್ ಮಾತನಾಡಿ, ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಶ್ರಮಿಸಿದ ಪಕ್ಷದ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ಘಟಕದ ಅಧ್ಯಕ್ಷ ಜಿ.ಸಿ.ಜಗದೀಶ್, ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ ಹಾಗೂ ಪ್ರಮುಖರಾದ ಸುದಯ್ ನಾಣಯ್ಯ ಉಪಸ್ಥಿತರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*