ಮಡಿಕೇರಿ ಮೇ 19 : ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ “ನನ್ನ ಜೀವನ ನನ್ನ ಸ್ವಚ್ಛ ನಗರ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರಂತೆ ಪಟ್ಟಣದ ವ್ಯಾಪ್ತಿಯ ನಾಗರಿಕರಿಗೆ/ ಸಾರ್ವಜನಿಕರಿಗೆ ತ್ಯಾಜ್ಯ ನಿರ್ವಹಣೆ ಮತ್ತು ಪರಿಸರ ಸಂರಕ್ಷಣೆಗೆ ತೊಡಗಲು ಆರ್‍ಆರ್‍ಆರ್ ಆಂದೋಲನ ಅಂದರೆ ತ್ಯಾಜದ ಪ್ರಮಾಣ ಕಡಿತಗೊಳಿಸುವುದು(ರೆಡ್ಯೂಷ್), ತ್ಯಾಜ್ಯದ ಮರುಬಳಕೆ(ರೆಸ್ಯೂ), ತ್ಯಾಜ್ಯದ ಮರು ಉಪಯೋಗದ(ರೀಸೈಕಲ್) ಬಗ್ಗೆ ಪಟ್ಟಣ ಪಂಚಾಯಿತಿ ವತಿಯಿಂದ ಮೇ, 20 ರಿಂದ ಜೂನ್, 5 ರವರೆಗೆ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ಈಗಾಗಲೇ ಸ್ಥಾಪಿಸಿರುವ ಕೇಂದ್ರಕ್ಕೆ ಮತ್ತು ವಾಹನಕ್ಕೆ ನಾಗರಿಕರು/ಸಾರ್ವಜನಿಕರು ತ್ಯಾಜ್ಯವನ್ನು ನೀಡಿ ಯಶಸ್ವಿಗೊಳಿಸಲು ಸಹಕರಿಬೇಕೆಂದು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಅವರು ತಿಳಿಸಿದ್ದಾರೆ.
ಜೇಸಿ. ವೇದಿಕೆ ಮತ್ತು ಆರ್‍ಆರ್‍ಆರ್ ಕೇಂದ್ರ ಆನ್ ವೀಲ್ಸ್ ಕೇಂದ್ರಕ್ಕೆ ಉಪಯೋಗಿಸಿದ ಪ್ಲಾಸ್ಟಿಕ್ ಸಾಮಗ್ರಿಗಳು, ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಮಕ್ಕಳ ಪ್ಲಾಸ್ಟಿಕ್ ಆಟಿಕೆಗಳು, ಬಟ್ಟೆಗಳು, ಹಳೇ ಜೀನ್ಸ್, ಯೂನಿಫಾರಂ, ಸೀರೆಗಳು, ಹಳೇ ಬಟ್ಟೆಗಳು, ಚಪ್ಪಲಿ, ಶೂಗಳು, ನ್ಯೂಸ್ ಪೇಪರ್, ಹಳೇ ಪುಸ್ತಕಗಳು ಮತ್ತಿತರ, ಎಲೆಕ್ಟ್ರಿಕಲ್ ಸಾಮಗ್ರಿಗಳು. ಭಾಗವಹಿಸುವ ಎಲ್ಲಾ ಸಾರ್ವಜನಿಕರಿಗೆ ಡಿಜಿಟಲ್ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು ಎಂದು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*