ನಾಪೋಕ್ಲು ಮೇ 19 : ನಾಪೋಕ್ಲು-ಮಡಿಕೇರಿ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ ತೋಟಗಾರಿಕಾ ಇಲಾಖೆಯ ಮುಂಭಾಗದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಸಲು ರಸ್ತೆಯನ್ನು ಹಗೆದುಹಾಕಿ ಸರಿಯಾಗಿ ಮುಚ್ಚದೆ ಇರುವುದರಿಂದ ವಾಹನ ಸವಾರರು ಅಪಘಾತಕ್ಕೀಡಾಗಿ ಆಸ್ಪತ್ರೆ ಸೇರುವ ಪರಿಸ್ಥಿತಿ ಎದುರಾಗಿದೆ ಎಂದು ಸಾರ್ವಜನಿಕರು, ವಾಹನ ಸವಾರರು ಆರೋಪಿಸಿದ್ದಾರೆ.
ನಾಪೋಕ್ಲು ಗ್ರಾ.ಪಂ ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ಕುಡಿಯುವ ನೀರನ್ನು ಪೂರೈಸುವ ಸಲುವಾಗಿ ಪೈಪ್ ಲೈನ್ ಅಳವಡಿಸಲು ಮುಖ್ಯ ರಸ್ತೆಯನ್ನು ಹಗೆದು ಹಾಕಲಾಗಿತ್ತು. ಆದರೆ ಪೈಪ್ ಲೈನ್ ಅಳವಡಿಸಿದ ಬಳಿಕ ಅಧಿಕಾರಿಗಳು ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲದಂತೆ ಗುಂಡಿಯನ್ನು ಸರಿಯಾದ ರೀತಿಯಲ್ಲಿ ಮುಚ್ಚದೇ ಹೋಗಿದ್ದಾರೆ. ಇದರಿಂದ ಈ ರಸ್ತೆಯಲ್ಲಿ ಸಾಗುವ ದ್ವಿಚಕ್ರ ವಾಹನ ಸವಾರರು ಬಿದ್ದು ಆಸ್ಪತ್ರೆ ಸೇರುವ ಪರಿಸ್ಥಿತಿ ಎದುರಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರತಿನಿತ್ಯ ನೂರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿದ್ದು ಸವರಾರು ಗುಂಡಿಯಲ್ಲಿ ಸಿಲುಕಿ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗುವಂತ್ತಾಗಿದೆ. ಈ ರಸ್ತೆಯು ನಾಪೋಕ್ಲು ಮಡಿಕೇರಿ ಹೋಗುವ ಮುಖ್ಯ ರಸ್ತೆಯಾಗಿದ್ದು, ವಾಹನ ಸವಾರರು ರಸ್ತೆಯಲ್ಲಿರುವ ಗುಂಡಿ ತಿಳಿಯದೆ ಅಪಾಯಕ್ಕೆ ಸಿಲುಕುವಂತಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟ ಗ್ರಾ.ಪಂ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಜನರ ಪ್ರಾಣವನ್ನು ಉಳಿಸಲು ತಕ್ಷಣ ರಸ್ತೆಯ ಗುಂಡಿಯನ್ನು ಡಾಂಬರೀಕರಣಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಬೇಕು. ಇಲ್ಲದಿದ್ದರೆ ಮುಂದೆ ಆಗುವ ಅನಾಹುತಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ನೇರ ಹೊಣೆ ಹೊರಬೇಕಾಗುತ್ತದೆ ಎಂದು ನಾಪೋಕ್ಲು ವಾಹನ ಚಾಲಕರ ಸಂಘ ಮತ್ತು ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.
ವರದಿ :ಝಕರಿಯ ನಾಪೋಕ್ಲು