ಮಡಿಕೇರಿ ಮೇ 19 : ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲವು ಸಾಧಿಸಿ ಇಬ್ಬರು ನೂತನ ಶಾಸಕರು ಆಯ್ಕೆಯಾಗಿದ್ದು, ಹೊಸ ಸರ್ಕಾರ ರಚನೆ ಸಂದರ್ಭ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ರಕ್ಷಣಾ ವೇದಿಕೆ ಒತ್ತಾಯಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಕೊರವೇ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ, ನೂತನವಾಗಿ ಆಯ್ಕೆಯಾಗಿರುವ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ವೈದ್ಯರಾಗಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಕೀಲರಾಗಿ ಸಾಕಷ್ಟು ಹೆಸರು ಮಾಡಿದ್ದಾರೆ. ಇಬ್ಬರೂ ವಿದ್ಯಾವಂತರು, ಮಾತ್ರವಲ್ಲದೆ ಅಭಿವೃದ್ಧಿಪರ ಚಿಂತನೆಯ ಉತ್ಸಾಹಿ ಯುವಕರಾಗಿದ್ದಾರೆ. ಸಚಿವ ಸ್ಥಾನವನ್ನು ನಿಭಾಯಿಸಲು ಇವರು ಅರ್ಹರಾಗಿದ್ದು, ಕನಿಷ್ಠ ಒಬ್ಬರಿಗಾದರು ಮಂತ್ರಿಗಿರಿ ನೀಡಬೇಕೆಂದು ಆಗ್ರಹಿಸಿದ್ದಾರೆ.
ಕಳೆದ ಅನೇಕ ವರ್ಷಗಳಿಂದ ಜಿಲ್ಲೆಯವರಿಗೆ ಸಚಿವ ಸ್ಥಾನ ದೊರೆಯದೆ ಅಭಿವೃದ್ಧಿ ಕಾರ್ಯಗಳು ಕುಂಟಿತಗೊಂಡಿವೆ. ಜಿಲ್ಲೆಯ ಜನರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ದೊರೆಯದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಸರ್ಕಾರ ರಚಿಸುತ್ತಿದ್ದು, ಸಚಿವ ಸಂಪುಟದಲ್ಲಿ ಕೊಡಗಿನವರಿಗೆ ಸ್ಥಾನ ಕಲ್ಪಿಸಬೇಕು. ಕಾವೇರಿ ನೀರು ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ತನ್ನದೇ ಆದ ರೀತಿಯಲ್ಲಿ ಪುಟ್ಟ ಜಿಲ್ಲೆ ಕೊಡಗು ಅಪಾರ ಕೊಡುಗೆಯನ್ನು ನೀಡುತ್ತಾ ಬಂದಿದೆ. ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆಯ ಜನರಿಗೆ ಸರ್ಕಾರ ಉಡುಗೊರೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಸ್ಥಳೀಯರೇ ಜಿಲ್ಲಾ ಉಸ್ತುವಾರಿ ಸಚಿವರಾದರೆ ಜಿಲ್ಲೆ ಸಾಕಷ್ಟು ಅಭಿವೃದ್ಧಿಯನ್ನು ಕಾಣಲು ಸಾಧ್ಯವಾಗುತ್ತದೆ. ಜಿಲ್ಲೆಗೊಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಹಲವು ವರ್ಷಗಳ ಬೇಡಿಕೆ ಈಡೇರಬೇಕಾದರೆ ಜಿಲ್ಲೆಯ ಶಾಸಕರೊಬ್ಬರು ಸಚಿವರಾಗಬೇಕು. ಮಡಿಕೇರಿ ನಗರದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾಗೊಳಿಸಲು ಕೂಡ ಸಹಕಾರಿಯಾಗಲಿದೆ. ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆಯಬೇಕಾಗಿದೆ. ಇದಕ್ಕೆ ಹೆಚ್ಚಿನ ಅನುದಾನದ ಅಗತ್ಯವೂ ಇದೆ, ಜಿಲ್ಲೆಯ ಶಾಸಕರೊಬ್ಬರು ಸಚಿವರಾದರೆ ದೊಡ್ಡ ಮೊತ್ತದ ಅನುದಾನವನ್ನು ತರಬಹುದಾಗಿದೆ ಎಂದು ತಿಳಿಸಿರುವ ಪವನ್ ಪೆಮ್ಮಯ್ಯ, ಇಬ್ಬರು ನೂತನ ಶಾಸಕರಿಗೆ ಕೊರವೇ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಜಿಲ್ಲೆಯ ಹೊಸ ಶಾಸಕರಿಂದ ಜನಪರವಾದ ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಿರೀಕ್ಷಿಸಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳಾಗಿದ್ದು, ಒಳ್ಳೆಯ ಕಾರ್ಯಗಳಿಗೆ ಕೊರವೇ ಸದಾ ಬೆಂಬಲ ಸೂಚಿಸುತ್ತಾ ಬರಲಿದೆ. ನ್ಯೂನತೆಗಳು ಕಂಡು ಬಂದಲ್ಲಿ ಸರಿ ಪಡಿಸಿಕೊಳ್ಳುವಂತೆ ಸಲಹೆ ನೀಡಲಿದೆ ಎಂದು ಹೇಳಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*