ಮಡಿಕೇರಿ ಮೇ 19 : ಕೊಡಗು ಜಿಲ್ಲೆಯಲ್ಲಿ ಮೇ 20 ಮತ್ತು 21 ರಂದು ನಡೆಯುವ ಸಿಇಟಿ ಪರೀಕ್ಷೆಯನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ, ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು ಹಾಗೂ ಸಂತ ಜೋಸೆಪರ ಬಾಲಕಿಯರ ಪದವಿ ಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶಿಸಿದ್ದಾರೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.
ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಯಾವುದೇ ನಿಯಮಬಾಹಿರ ಕಾರ್ಯಗಳನ್ನು ನಡೆಸತಕ್ಕದ್ದಲ್ಲ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.
ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಕಂಪ್ಯೂಟರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*