ಮಡಿಕೇರಿ ಮೇ 19 : ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ 2023-24ನೇ ಸಾಲಿಗೆ ಪ್ರಥಮ ಬಿಎ ಮತ್ತು ಬಿಕಾಂ ತರಗತಿಗಳಿಗೆ ಪ್ರವೇಶಾತಿ ಆರಂಭಗೊಂಡಿದೆ.
ನೂತನವಾಗಿ ಪ್ರಾರಂಭವಾಗಿರುವ ಕೊಡಗು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ ಈ ಕಾಲೇಜಿಗೆ ಪ್ರವೇಶ ಪಡೆಯಲು ಇಚ್ಛಿಸಿರುವ ವಿದ್ಯಾರ್ಥಿನಿಯರು ಆದಷ್ಟು ಬೇಗ ಕಚೇರಿಯಿಂದ ಅರ್ಜಿ ಪಡೆದುಕೊಂಡು ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ಪ್ರವೇಶ ಪಡೆಯಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗೆ ದೂ.ಸಂ.9945185783, 9845907344, 9008180049, 9538506370 ನ್ನು ಸಂಪರ್ಕಿಸಬಹುದು ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಜವರಪ್ಪ ತಿಳಿಸಿದ್ದಾರೆ.









