ಮಡಿಕೇರಿ ಮೇ 19 : ಕೊಡಗು ಜಿಲ್ಲಾ ಪಂಚಾಯಿತಿಯ 5 ತಾಲೂಕು ಪಂಚಾಯಿತಿಗಳಲ್ಲಿ ಗ್ರಾಮ ಪಂಚಾಯತ್‍ಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪ್ಲಾಸ್ಟಿಕ್ ಬಳಕೆ ಮಾಡುತಿದ್ದ ವಾಣಿಜ್ಯ ಮಳಿಗೆಗಳಿಂದ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ವಿಧಿಸಲಾಗಿದೆ.
ಪ್ಲಾಸ್ಟಿಕ್ ಅನಾಹುತದ ಕುರಿತು ಮುಂದಿನ ದಿನಗಳಲ್ಲಿ ವಾಣಿಜ್ಯ ಮಳಿಗೆಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‍ಗಳನ್ನು ಸಂಪೂರ್ಣವಾಗಿ ನಿಷೇಧ ಮಾಡಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಗ್ರಾಹಕರಿಗೆ ಈ ಕುರಿತು ಜಾಗೃತಿ ಮೂಡಿಸಲಾಯಿತು.
ಪ್ಲಾಸ್ಟಿಕ್ ಬಳಕೆಯನ್ನು ಮಾಡಿದ್ದಲ್ಲಿ ದಂಡದ ಮೊತ್ತ ದುಪ್ಪಟ್ಟು ಆಗುವ ಬಗ್ಗೆ ತಿಳಿಸಿ, ಈ ಬಗ್ಗೆ ಗ್ರಾ.ಪಂ ಗಳಲ್ಲಿ ವ್ಯಾಪಕ ಜಾಗೃತಿ ನೀಡಲು ಕ್ರಮವಹಿಸಲಾಗಿದೆ ಎಂದು ಸ್ವಚ್ಛ ಭಾರತ ಅಭಿಯಾನದ ಜಿಲ್ಲಾ ನೋಡಲ್ ಅಧಿಕಾರಿ ಜಗದೀಶ್ ತಿಳಿಸಿದ್ದಾರೆ.









