ಮಡಿಕೇರಿ ಮೇ 19 : ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ಆಯ್ಕೆಯಾಗಿರುವ ಇಬ್ಬರು ಶಾಸಕರು ಬಡವರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳಬೇಕೆಂದು ಮಡಿಕೇರಿ ನಗರಸಭಾ ಸದಸ್ಯ ಎಂ.ಕೆ.ಮನ್ಸೂರ್ ಆಲಿ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇಬ್ಬರು ಶಾಸಕರಿಗೆ ಅಭಿನಂದನೆ ಸಲ್ಲಿಸುವುದರೊಂದಿಗೆ ಅಭಿವೃದ್ಧಿಪರ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
ಕಳೆದ 30 ವರ್ಷಗಳಿಂದ ಜಿಲ್ಲೆಯಾದ್ಯಂತ ನಿವೇಶನ ರಹಿತರಿಗೆ ನಿವೇಶನ ನೀಡುವ ಮತ್ತು ಸ್ವಂತ ಸೂರು ಕಲ್ಪಿಸುವ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿಲ್ಲ. ಬೃಹತ್ ಪ್ರಮಾಣದ ಸರ್ಕಾರಿ ಭೂಮಿಯನ್ನು ಗುರುತಿಸಿ ನಿವೇಶನ ಹಂಚಿಕೆ ಮಾಡುವ ಕಾರ್ಯಕ್ಕೆ ಇಬ್ಬರು ನೂತನ ಶಾಸಕರು ನಾಂದಿ ಹಾಡಬೇಕೆಂದು ಆಗ್ರಹಿಸಿದ್ದಾರೆ.
ಮಡಿಕೇರಿ ನಗರಸಭಾ ಕಚೇರಿಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕೊರತೆ ಇದೆ. ಇದರಿಂದ ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿದೆ. ತಕ್ಷಣ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಈ ಕ್ಷೇತ್ರದ ಶಾಸಕರು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ನೂತನ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಮತ್ತು ಕೊಡಗಿನ ಅಭಿವೃದ್ಧಿಯನ್ನು ನಿರೀಕ್ಷಿಸುತ್ತೇವೆ ಎಂದು ತಿಳಿಸಿರುವ ಮನ್ಸೂರ್ ಆಲಿ, ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.
Breaking News
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*
- *ವೀರ ಸೇನಾನಿಗಳಿಗೆ ಅಗೌರವ : ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆ ಖಂಡನೆ : ಆರೋಪಿಯ ಗಡಿಪಾರಿಗೆ ಆಗ್ರಹ*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶ*
- *ನ.29ರಂದು ಕೊಡಗು ಜಿಲ್ಲಾ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆಯ 12ನೇ ವಾರ್ಷಿಕ ಮಹಾಸಭೆ*
- *ನ.30 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಮತ್ತು ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ*
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*