ಕೊಡ್ಲಿಪೇಟೆ ಮೇ 20 : ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ಹಾಗೂ ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಜಮಾಅತ್ ವ್ಯಾಪ್ತಿಯಲ್ಲಿ ಅತ್ಯುತ್ತಮ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್‍ಕೆಎಸ್‍ಎಸ್‍ಎಫ್ ಹಾಗೂ ಎಸ್‍ವೈಎಸ್ ಕೊಡ್ಲಿಪೇಟೆ ಶಾಖೆಯ ವತಿಯಿಂದ ಬಹುಮಾನ ವಿತರಿಸಲಾಯಿತು.
ಕೊಡ್ಲಿಪೇಟೆ ಸಮೀಪದ ನೂರ್ ಮಹಲ್ ನಲ್ಲಿ ಆಯೋಜಿಸಿದ ಮಾಸಿಕ ಮಜ್ಲಿಸುನ್ನೂರ್ ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಫಾತಿಮತ್ ಸಫ್ನಾ ಪ್ರಥಮ ಹಾಗೂ ಸನಾ ದ್ವಿತೀಯ ಮತ್ತು ದ್ವಿತೀಯ ಪಿಯುಸಿ ಯಲ್ಲಿ ವಿಜ್ಞಾನ ವಿಭಾಗದಲ್ಲಿ ಸಫಾ ಹಾಗೂ ಕಲಾ ವಿಭಾಗದಲ್ಲಿ ನಫೀಸತ್ ನಾಫಿಯಾ ಅವರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ತಜಲ್ಲಿಯಾತ್ ಮದರಸ ಮುಖ್ಯೋಪಾಧ್ಯಾಯ ರಝಾಕ್ ಫೈಝಿ, ಸಮದ್ ಫೈಝಿ, ಮಸ್ಜಿದುನ್ನೂರ್ ಅಧ್ಯಕ್ಷ ಸುಲೈಮಾನ್, ಪ್ರಧಾನ ಕಾರ್ಯದರ್ಶಿ ಹಾಗೂ ಗ್ರಾ.ಪಂ ಸದಸ್ಯ ಹನೀಫ್, ಎಸ್‍ಕೆಎಸ್‍ಎಸ್‍ಎಫ್ ಕೊಡಗು ಜಿಲ್ಲಾ ಕೋಶಾಧಿಕಾರಿ ಸಿದ್ದೀಕ್ ಹಾಜಿ, ಎಸ್‍ವೈಎಸ್ ಕೊಡ್ಲಿಪೇಟೆ ಶಾಖಾಧ್ಯಕ್ಷ ಇಬ್ರಾಹಿಂ, ಎಸ್‍ಕೆಎಸ್‍ಎಸ್‍ಎಫ್ ಅಧ್ಯಕ್ಷ ಬಾಸಿತ್ ಹಾಜಿ ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಝಹೀರ್ ನಿಝಾಮಿ ನಿರೂಪಿಸಿದರು.