ಬೆಂಗಳೂರು ಮೇ 20 : ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು.
ಉಭಯ ನಾಯಕರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಿಕೆ ಶಿವಕುಮಾರ್ ಅವರು ಸ್ವಾಮಿ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣವಚನ ಸ್ವೀಕರಿಸಿದ 8 ಸಚಿವರ ವಿವರ
ಎಂ. ಬಿ. ಪಾಟೀಲ್
ಡಾ. ಜಿ. ಪರಮೇಶ್ವರ್
ಪ್ರಿಯಾಂಕ ಖರ್ಗೆ
ಕೆ.ಎಚ್. ಮುನಿಯಪ್ಪ
ಕೆ. ಜೆ. ಜಾರ್ಜ್
ಸತೀಶ್ ಜಾರಕಿಹೊಳಿ
ಜಮೀರ್ ಅಹ್ಮದ್ ಖಾನ್
ರಾಮಲಿಂಗಾ ರೆಡ್ಡಿ