ಮಡಿಕೇರಿ ಮೇ 20 : ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹಾಗೂ 8 ಸಚಿವರುಗಳ ಪದಗ್ರಹಣ ಹಿನ್ನೆಲೆ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯೋತ್ಸವ ನಡೆಯಿತು.
ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ, ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.
ಈ ಸಂದರ್ಭ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಡಿಸಿಸಿ ಸದಸ್ಯರಾದ ಪುಷ್ಪ ಪೂಣಚ್ಚ, ಕೆ.ಯು.ಅಬ್ದುಲ್ ರಜಾಕ್, ಪ್ರಕಾಶ್ ಆಚಾರ್ಯ, ಚುಮ್ಮಿದೇವಯ್ಯ, ಕಲೀಲ್ ಬಾಷ, ಜುಲೇಕಾಬಿ, ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ಬಿ.ಎನ್.ಪ್ರತ್ಯು, ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್, ಎಸ್.ಸಿ.ಘಟಕದ ನಗರಾಧ್ಯಕ್ಷ ಮುದ್ದುರಾಜ್, ಮಹಿಳಾ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಪ್ರಮುಖರಾದ ಪ್ರಭುರೈ, ಸದಾಮುದ್ದಪ್ಪ, ಯಾಕುಬ್, ಮುತ್ತು ಬೇಗಂ, ಬಿ.ಗಣೇಶ್, ಗೀತಾ ಸೇರಿದಂತೆ ನಗರ ಕಾಂಗ್ರೆಸ್ ಪದಾಧಿಕಾರಿಗಳು ಹಾಜರಿದ್ದರು.