ಚೆಟ್ಟಳ್ಳಿ ಮೇ 20 : ಎಸ್ ವೈ ಎಸ್ ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ಸುಸಜ್ಜಿತವಾಗಿ ನವೀಕರಿಸಿದ ವರಕ್ಕಲ್ ಸಮಸ್ತ ಭವನ ಹಾಗೂ ಖಾಝಿ ಹೌಸ್ ಉದ್ಘಾಟನಾ ಸಮಾರಂಭ ಮೇ 21 ರಂದು ಸಿದ್ದಾಪುರದಲ್ಲಿ ನಡೆಯಲಿದ್ದು,ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾ ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ತಮ್ಲೀಕ್ ದಾರಿಮಿ ಕರೆ ನೀಡಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಸಯ್ಯಿದುಲ್ ಉಲಮಾ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ಕಟ್ಟಡ ಉದ್ಘಾಟನೆ ನೆರವೇರಿಸಲಿದ್ದಾರೆ. ಕೊಡಗು ಖಾಝಿ ಸಯ್ಯಿದ್ ಮುಹಮ್ಮದ್ ಕೋಯ ತಂಙಳ್ ಜಮಲುಲ್ಲೈಲಿ ಹಾಗೂ ಕೊಡಗು ಉಪ ಖಾಝಿ ಶೈಖುನಾ ಎಂ. ಎಂ ಅಬ್ದುಲ್ಲಾ ಫೈಝಿ, ಅಬ್ದುಲ್ ರಹ್ಮಾನ್ ಮುಸ್ಲಿಯಾರ್, ಬಶೀರ್ ಹಾಜಿ ಹೀಗೆ ಸಮಸ್ತದ ಹಲವು ಉಲಮಾ, ಉಮರಾ ನೇತಾರರು ಭಾಗವಹಿಸಲಿರುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಸ್.ಕೆ.ಎಸ್.ಎಸ್.ಎಫ್ ಕೊಡಗು ಜಿಲ್ಲಾ ಸಮಿತಿ ತಿಳಿಸಿದೆ.








