ಮಡಿಕೇರಿ ಮೇ 20 : ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಮತ್ತು ತೆಲಂಗಾಣ ದಕ್ಷಿಣ ರಾಜ್ಯಗಳ ವಿದ್ಯುತ್ ನಿಯಂತ್ರಣ ಆಯೋಗದ ಸದಸ್ಯರ ತಂಡವು ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಕರ್ನಾಟಕ ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷ ರವಿಕುಮಾರ್ ನೇತೃತ್ವದಲ್ಲಿ ದಕ್ಷಿಣ ರಾಜ್ಯಗಳ ವಿದ್ಯುತ್ ನಿಯಂತ್ರಣ ಆಯೋಗದ ಸದಸ್ಯರ ತಂಡವು ಭೇಟಿ ನೀಡಿ, ಮಾಹಿತಿ ಪಡೆದರು.
ಭಾರತೀಯ ಸೇನಾ ಕ್ಷೇತ್ರದಲ್ಲಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಕೊಡುಗೆ ಅಪಾರವಾಗಿದೆ. ಭಾರತೀಯ ಸೇನೆಯ ಮಹತ್ವ ಹಾಗೂ ಯುವ ಜನರು ಸೇನಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನ ಸ್ಫೂರ್ತಿಯಾಗಿದೆ ಎಂದು ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.
ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಅನಿತಾ ಬಾಯಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್, ಸಂಪತ್ ಇತರರು ಇದ್ದರು.








