ಮಡಿಕೇರಿ ಮೇ 20 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಹಾಗೂ ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಸಹಯೋಗದಲ್ಲಿ ಮೇ 26 ರಿಂದ 28 ರವರೆಗೆ ಕೊಡಗು ಜಿಲ್ಲಾ ಹಾಪ್ ಕಾಮ್ಸ್ ನಲ್ಲಿ ಮಾವು ಮತ್ತು ಹಲಸು ಮೇಳ ನಡೆಯಲಿದೆ.
ಮಾವು ಮತ್ತು ಹಲಸು ಮೇಳದ ಉದ್ಘಾಟನಾ ಕಾರ್ಯಕ್ರಮವು ಮೇ 26 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.









