ಮಡಿಕೇರಿ ಮೇ 21 : ನಗರದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ, ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ದೈವ ಕೋಲವು ಮೇ 22 ರಿಂದ ಆರಂಭಗೊಳ್ಳಲಿದೆ.
ಪಯ್ಯನ್ನೂರ್ ಆಚಾರ್ಯ ಈಶ್ವರನ್ ನಂಬೂದರಿ ಅವರ ನೇತೃತ್ವದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ.
ಮೇ 22 ರಂದು ಸಂಜೆ 6 ಗಂಟೆಗೆ ಆಚಾರ್ಯ ವರಣಂ, ಪುಣ್ಯಹ ಶುದ್ಧಿ, ಸುದರ್ಶನ ಹೋಮ, ದೇವಿ ಪೂಜೆ, ಲಲಿತಾ ಸಹಸ್ರನಾಮಾರ್ಚನೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ.
ಮೇ 23 ರಂದು ಬೆಳಿಗ್ಗೆ 6 ಗಂಟೆಯಿಂದ ಮಹಾಗಣಪತಿ ಹೋಮ, ನವಕ ಪಂಚಗವ್ಯ, ಕಳಸ ಪೂಜೆ, ಕಳಶಾಭಿಷೇಕ, ಸರ್ವಾಲಂಕಾರ, ಮಹಾಪೂಜೆ ಹಾಗೂ ಪಾಷಾಣಮೂರ್ತಿ ದೈವದ ಕಳಸ ಪೂಜೆ, ಅಲಂಕಾರ ಪೂಜೆ ಮತ್ತು ಮಂಗಳಾರತಿ ನಡೆಯಲಿದೆ.
::: ನಾಗದರ್ಶನ :::
ಬೆಳಿಗ್ಗೆ 8 ಗಂಟೆಗೆ ಆಶ್ಲೇಷ ಬಲಿ, ನಾಗಪೂಜೆ, ಕ್ಷೀರಾಭೀಷೇಕ ನಡೆಯಲಿದ್ದು, ಪೂವಾಹ್ನ 11 ಗಂಟೆಗೆ ನಾಗದರ್ಶನ, ಮಹಾ ಪೂಜೆ, ಪ್ರಸಾದ ವಿತರಣೆ ಮತ್ತು ಮಧ್ಯಾಹ್ನ 12.30ಕ್ಕೆ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಲಿದೆ. ಉಡುಪಿಯ ಪೆರ್ಲಂಪಾಡಿ ರಮಾನಂದ ಭಟ್ ನಾಗಪಾತ್ರಿಗಳಾಗಿ ನಾಗಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶನ ನಡೆಸಿಕೊಡಲಿದ್ದಾರೆ.
::: ಅಗೆಲು ಸೇವೆ :::
ರಾತ್ರಿ 7.30ರಿಂದ ಪಾಷಾಣಮೂರ್ತಿ ದೈವಕೋಲ ಮತ್ತು ಮೇ 24 ರಂದು ಸಂಜೆ 5 ಗಂಟೆಯಿಂದ ಪಾಷಾಣಮೂರ್ತಿ ದೈವದ ಅಗೆಲು ಸೇವೆ ನಡೆಯಲಿದೆ. ಅಗೆಲು ಸೇವೆ ನೀಡುವ ಭಕ್ತರು ಒಂದು ದಿನ ಮುಂಚಿತವಾಗಿ ದೇವಾಲಯದಲ್ಲಿ ರಶೀದಿಯನ್ನು ಪಡೆದುಕೊಳ್ಳಬೇಕೆಂದು ಶ್ರೀಕೋಟೆ ಮಾರಿಯಮ್ಮ ದೇವಾಲಯ ಟ್ರಸ್ಟ್ ಮನವಿ ಮಾಡಿದೆ ಮತ್ತು ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಿದೆ.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*