ಮಡಿಕೇರಿ ಮೇ 21 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಡಾ.ಮಂತರ್ ಗೌಡ ಅವರು ಆಯ್ಕೆಯಾಗಿರುವುದು ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿರುವ ಹಿನ್ನೆಲೆ ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ ನಡೆಯಿತು.
ನಗರದ ಜಿಲ್ಲಾಸ್ಪತ್ರೆಯಲ್ಲಿ ಪಕ್ಷದ ನಗರಾಧ್ಯಕ್ಷ ಬಿ.ವೈ.ರಾಜೇಶ್ ಅವರ ಮಾರ್ಗದರ್ಶನದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಎಂ.ಜಿ ಅವರ ನೇತೃತ್ವದಲ್ಲಿ ರಕ್ತದಾನ ಮಾಡಿದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬಗ್ಗೆ ಹರ್ಷ ವ್ಯಕ್ತಪಡಿಸಿದರು.
ಪ್ರಮೋದ್ ಮಾತನಾಡಿ ಜನಪರವಾಗಿರುವ ಕಾಂಗ್ರೆಸ್ ಸರ್ಕಾರದಿಂದ ಕೊಡಗು ಜಿಲ್ಲೆ ಅಭಿವೃದ್ಧಿಯಾಗಲಿದೆ. ಅಲ್ಲದೆ ನೂತನ ಶಾಸಕ ಡಾ.ಮಂತರ್ ಗೌಡ ಅವರು ಮಡಿಕೇರಿ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.












