ಮಡಿಕೇರಿ ಮೇ 21 : ರಾಜ್ಯವ್ಯಾಪಿ ಸಿಡಿಲಿನಾರ್ಭಟದೊಂದಿಗೆ ಗಾಳಿ ಮಳೆಯಾಗುತ್ತಿದ್ದು, ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ ಘಟನೆ ಹುಣುಸೂರು ತಾಲ್ಲೂಕಿನ ಬಿಳಿಕೆರೆ ಹೋಬಳಿಯ ಮಂಟಿಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಹರೀಶ್ (42) ಎಂಬುವವರೇ ಮೃತ ದುರ್ದೈವಿ. ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಈ ಘಟನೆ ನಡೆದಿದೆ. ಗುಡುಗು, ಮಿಂಚು, ಗಾಳಿ ಸಹಿತ ಮಳೆ ಸುರಿಯುತ್ತಿದ್ದ ಕಾರಣ ಜಮೀನಿನಲ್ಲಿದ್ದ ಗುಡಿಸಲ ಬಳಿ ಆಶ್ರಯ ಪಡೆದಿದ್ದರು. ಈ ವೇಳೆ ಸಿಡುಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಶಾಸಕ ಜಿ.ಡಿ.ಹರೀಶ್‌ಗೌಡ ಭೇಟಿ ನೀಡಿ ಸಾಂತ್ವನ ಹೇಳಿದರು.