ಮಡಿಕೇರಿ ಮೇ 21 : ಭಾರೀ ಬಿರುಗಾಳಿ ಮಳೆಗೆ ಮನೆಗಳ ಮೇಲ್ಚಾವಣಿಗಳು ಹಾರಿ, ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಹುಣುಸೂರು ತಾಲ್ಲೂಕು ವ್ಯಾಪ್ತಿಯಲ್ಲಿ ನಡೆದಿದೆ.
ಹಲವು ಗ್ರಾಮಗಳಲ್ಲಿ 25ಕ್ಕೂ ಹೆಚ್ಚು ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ. ಮರಗಳು ಧರೆಗುರುಳಿವೆ, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಹನಗೋಡು ಹೋಬಳಿಯ ಬಹುತೇಕ ಗ್ರಾಮಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.
ಎಚ್.ಡಿ.ಕೋಟೆ ಹಾಗೂ ಹನಗೋಡು ಮುಖ್ಯ ರಸ್ತೆಯಲ್ಲಿ ಮರಗಳು ವಿದ್ಯುತ್ ಮಾರ್ಗದ ಮೇಲೆ ಬಿದ್ದಿದೆ.
ಜೋಳದ ಬೆಳೆ ಮಳೆ ನೀರಿನಿಂದ ಆವೃತವಾಗಿದೆ. ಹುಣಸೂರು-ಎಚ್.ಡಿ.ಕೋಟೆ ಮುಖ್ಯರಸ್ತೆ ವ್ಯಾಪ್ತಿಯಲ್ಲೂ ಮರ, ವಿದ್ಯುತ್ ಕಂಬಗಳು ಧರೆಗುರುಳಿವೆ.











