ಸುಂಟಿಕೊಪ್ಪ ಮೇ 22: ಹರದೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಆಯೋಜಿಸಲಾಗಿರುವ ಗ್ರಾಮೀಣ ಬೇಸಿಗೆ ಶಿಬಿರಕ್ಕೆ ಗ್ರಾ.ಪಂ ಅಧ್ಯಕ್ಷ ಬಿ.ಡಿ.ಪದ್ಮನಾಭ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿ.ಬಿ.ಪೂರ್ಣಿಮ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ವೈಯಕ್ತಿಕ ಪ್ರತಿಭೆ ಬೆಳಸಿ ಪ್ರೋತ್ಸಾಹಿಸುವ ಹಾಗೂ ಅವರ ಜ್ಞಾನ ಆರೋಗ್ಯದ ಬಗ್ಗೆ ಆರಿವು ನೀಡುವ ದಿಸೆಯಲ್ಲಿ ಬೇಸಿಗೆ ಶಿಬಿರವನ್ನು ಗ್ರಾಮೀಣ ಮಟ್ಟದಲ್ಲಿ ಆಯೋಜಿಸಲಾಗಿದೆ ಇದರ ಪ್ರಯೋಜನವನ್ನು ಮಕ್ಕಳು ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಈ ಸಂದರ್ಭ ಗ್ರಂಥಾಲಯ ಮೇಲ್ವಿಚಾರಕಿ ಸಂದ್ಯಾ, ಗ್ರಾ.ಪಂ ಸಿಬ್ಬಂದಿಗಳು, ಮಕ್ಕಳು ಇದ್ದರು.








