ಮಡಿಕೇರಿ ಮೇ 23 : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನ ಮುಂಗಾರಿನ ಸಮಯದಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತಯಾರಾಗಿದೆ. ಈ ನಿಟ್ಟಿನಲ್ಲಿ, ಭೂಕುಸಿತ, ಪ್ರವಾಹ, ಮಳೆ ಹಾನಿ, ಭೂಮಿಯಲ್ಲಿ ನೀರು ಹರಿಯುವ ಸದ್ದು, ಭೂಮಿಯಲ್ಲಿ ಹೊಸದಾಗಿ ಮೂಡಿರುವ ಬಿರುಕುಗಳು ಇದ್ದಲ್ಲಿ ಅಥವಾ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದಾದರೂ ದೂರುಗಳಿದ್ದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 08272-221077, 08272-221099
ಗೆ ಕರೆ ಮಾಡಿ ಮಾಹಿತಿ ನೀಡಬಹುದು.
ಹಾಗೆಯೇ 8550001077 ಈ ಸಂಖ್ಯೆಗೆ ವಾಟ್ಸಾಪ್ ಮಾಡಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.








