ನಾಪೋಕ್ಲು ಮೇ 23 : ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆಯನ್ನು ಆಚರಿಸಲಾಯಿತು.
ಮಡಿಕೇರಿಯ ಮೆಡಿಕಲ್ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಪ್ರಿಯದರ್ಶಿನಿ ಮಾತನಾಡಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಇದು ಸೂಕ್ತವಾದ ವೇದಿಕೆಯಾಗಿದೆ. ಯಾವುದೇ ಹಿಂಜರಿಕೆ ಇಲ್ಲದೆ ತಮ್ಮಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರೇಖಾ ಚಿಣ್ಣಪ್ಪ ಮಾತನಾಡಿ, ವಿದ್ಯಾರ್ಥಿಗಳು ಈ ರೀತಿಯ ವೇದಿಕೆಯನ್ನು ಹೆಚ್ಚು ಹೆಚ್ಚು ಉಪಯೋಗಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಸಂಸ್ಥೆಯ ಉಪಾಧ್ಯಕ್ಷ ಪುದಿಯೋಕ್ಕಡ ಸುಬ್ರಮಣ್ಯ ಮಾತನಾಡಿ ಶೈಕ್ಷಣಿಕ ಪಠ್ಯಗಳ ನಡುವೆ ಇಂತಹ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ಉತ್ಸಾಹವನ್ನು ತರುತ್ತದೆ ಎಂದು ಅಭಿಪ್ರಾಯಪಟ್ಟರು.
ಮೂರ್ನಾಡು ವಿದ್ಯಾಸಂಸ್ಥೆಯ ನಿರ್ದೇಶಕರಾದ ತೇಲಪಂಡ ಶೈಲ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವೇದಿಕೆಯಲ್ಲಿ ಸಂಸ್ಥೆಯ ನಿರ್ದೇಶಕ ಮೂಡೇರ ಕಾಳಯ್ಯ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ವರದಿ : ದುಗ್ಗಳ ಸದಾನಂದ.








