ಮಡಿಕೇರಿ ಮೇ 23 : ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ 27ನೇ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮೇ 28 ರಂದು ನಡೆಯಲಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಮರಾಠ-ಮರಾಟಿ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ್, ಅಂದು ಬೆಳಿಗ್ಗೆ 10 ಗಂಟೆಗೆ ತಾಳತ್ತಮನೆಯ ಸಂಘದ ನಿವೇಶನದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯನ್ನು ಉಡುಪಿ ಸಹಾಯಕ ಔಷಧಿ ನಿಯಂತ್ರಕ ಶಂಕರ್ ನಾಯ್ಕ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಾಬು ನಾಯ್ಕ್ ಡಿ. ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
::: ಪ್ರತಿಭಾ ಪುರಸ್ಕಾರ :::
2021-22ನೇ ಸಾಲಿನ 7ನೇ ತರಗತಿ, 10ನೇ ತರಗತಿ, ಪದವಿ ಪೂರ್ವ, ಅಂತಿಮ ಪದವಿ ಹಾಗೂ ಕೊಡಗಿನಲ್ಲಿ ವ್ಯಾಸಂಗ ಮಾಡಿರುವ ಮತ್ತು ವೃತ್ತಿಪರ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಜಿಲ್ಲೆಯ ಹೊರ ಭಾಗದಲ್ಲಿ ವ್ಯಾಸಂಗ ಮಾಡಿ ಅತೀ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಪತ್ರಿಭಾ ಪುರಸ್ಕಾರ ನೀಡಲಾಗುವುದು ಎಂದರು.
ಅರ್ಹ ವಿದ್ಯಾರ್ಥಿಗಳು ಮೇ 26ರ ಒಳಗೆ ವಾಟ್ಸ್‍ಪ್ ಸಂಖ್ಯೆ 94498 55345 ಗೆ ದಾಖಲಾತಿಗಳನ್ನು ಕಳುಹಿಸಿಕೊಡುವಂತೆ ಪರಮೇಶ್ವರ್ ಮನವಿ ಮಾಡಿದ್ದಾರೆ.










