ಮಡಿಕೇರಿ ಮೇ 23 : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ವಾರ್ಷಿಕವಾಗಿ ಕೊಡಮಾಡುವ ಕೆ.ಬಿ ಮಹಂತೇಶ್ ಸ್ಮರಣಾರ್ಥ ಅತ್ಯುತ್ತಮ ಪರಿಣಾಮಕಾರಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೊಡಗು ಪ್ರೆಸ್ ಕ್ಲಬ್ ಸದಸ್ಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, 2022 ರ ಜನವರಿ 1 ರಿಂದ ಡಿಸೆಂಬರ್ 31 ರ ಒಳಗಾಗಿ ಪ್ರಕಟವಾದ ವರದಿಯನ್ನು ಸಲ್ಲಿಸಬೇಕು. ಒಬ್ಬ ಸದಸ್ಯ ಒಂದು ವರದಿಯನ್ನು ಮಾತ್ರ ಸಲ್ಲಿಸಲು ಅವಕಾಶವಿದೆ. ಮೇ 30 ರ ಒಳಗಾಗಿ ಅರ್ಜಿಯನ್ನು ತಲುಪಿಸಬೇಕು. ಪ್ರಶಸ್ತಿಯು 5 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದ್ದು, ಪ್ರೆಸ್ ಕ್ಲಬ್ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









