ಮಡಿಕೇರಿ ಮೇ 23 : ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಕರ್ನಾಟಕ ರಾಜ್ಯದ ನೂತನ ಸರ್ಕಾರದ ಗಮನ ಸೆಳೆಯಲು ಮೇ 25 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿರುವುದಾಗಿ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗುರುವಾರ ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಿ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ನೂತನ ಸರ್ಕಾರಕ್ಕೆ ಸಲ್ಲಿಸುವುದಾಗಿ ಹೇಳಿದ್ದಾರೆ.
ಕೊಡವ ನೆಲ, ಭಾಷೆ, ಸಂಸ್ಕೃತಿ, ಪರಂಪರೆಯ ಉಳಿವಿಗಾಗಿ ಮತ್ತು ಅತ್ಯಂತ ಸೂಕ್ಷ್ಮ ಬುಡಕಟ್ಟು ಜನಾಂಗವಾಗಿರುವ ಕೊಡವರ ಸಬಲೀಕರಣಕ್ಕಾಗಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಮತ್ತು ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ಕಲ್ಪಿಸಬೇಕು, ಕೊಡವರಿಗೆ ಎಸ್‍ಟಿ ಟ್ಯಾಗ್ ನೀಡಬೇಕು, ಕೊಡವ ಭಾಷೆಯನ್ನು 8ನೇ ಶೆಡ್ಯೂಲ್ ಗೆ ಸೇರಿಸಬೇಕು, ಕೊಡವರಿಗೆ ಸಾಂವಿಧಾನಿಕ ಭದ್ರತೆಯನ್ನು ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದ್ದಾರೆ.









