ಮಡಿಕೇರಿ ಮೇ 23 : ಶಾಸಕ ಎ.ಎಸ್ ಪೊನ್ನಣ್ಣ ಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ವಿರಾಜಪೇಟೆ ನಗರ ಕಾಂಗ್ರೆಸ್ ಘಟಕದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ವಿರಾಜಪೇಟೆ ನಗರ ಅಧ್ಯಕ್ಷರಾದ ಮಾದಂಡ ತಿಮ್ಮಯ್ಯ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದ ಸಮಿತಿ ಸದಸ್ಯರು, ಈ ಬಾರಿ ಕೊಡಗಿನ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಇಬ್ಬರು ಶಾಸಕರು ವಿದ್ಯಾವಂತರಾಗಿದ್ದಾರೆ. ಆದ್ದರಿಂದ ಈ ಬಾರಿ ಶಾಸಕ ಎ.ಎಸ್ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರ ಘಟಕದ ಎಲ್ಲಾ ಸದಸ್ಯರು, ವಿರಾಜಪೇಟೆ ಪುರಸಭೆ ಸದಸ್ಯರು, ಕಾಂಗ್ರೆಸ್ ಮುಖಂಡರು ಹಾಜರಿದ್ದರು.









