ಮಡಿಕೇರಿ ಮೇ 24 : ಜಿಲ್ಲೆಯ ವಿವಿಧೆಡೆ ಸುರಿದ ಧಾರಕಾರ ಮಳೆಯಿಂದಾಗಿ ಮನೆ ಹಾಗೂ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.
ಮಾಲಂಬಿ ಅರಣ್ಯ ಪ್ರದೇಶದಲ್ಲಿ ವಿದ್ಯುತ್ ಪರಿವರ್ತಕ ಹಾಗೂ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಎಮ್ಮೆಮಾಡು ಗ್ರಾಮದ ಶಫೀಕ್ ಎಂಬವರ ಮನೆಯ ಮೇಲೆ ಸಿಲ್ವರ್ ಮರ ಬಿದ್ದುದರ ಪರಿಣಾಮವಾಗಿ ಮೇಲ್ಛಾವಣಿಯ 5 ಶೀಟುಗಳು ಹಾನಿಗೊಂಡಿದೆ.
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.