ಮಡಿಕೇರಿ ಮೇ 24 : ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮಹಿಳೆಯರ ಫುಟ್ಬಾಲ್ ಪಂದ್ಯಾವಳಿಯು ಸಂತ ಅನ್ನಮ್ಮ ಪದವಿ ಕಾಲೇಜಿನ ಮೈದಾನದಲ್ಲಿ ನಡೆಯಿತು.
ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಆಶ್ರಯದಲ್ಲಿ ನಡೆದ ಪಂದ್ಯಾವಳಿಯನ್ನು ಸಂತ ಅನ್ನಮ್ಮ ವಿದ್ಯಾ ಸಂಸ್ಥೆಯ ಮುಖ್ಯಸ್ಥ ರೆವರೆಂಡ್ ಫಾದರ್ ಐಸಾಕ್ ರತ್ಕಾಕರ್ ಉದ್ಘಾಟಿಸಿದರು.
ಈ ಸಂದರ್ಭ ಸಂತ ಅನ್ನಮ್ಮ ಕಾಲೇಜಿನ ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ ಹಾಜರಿದ್ದರು.
ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ್ ಡಿಸೋಜ ವೀಕ್ಷಕರಾಗಿ ಆಗಮಿಸಿದ್ದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಸಿ.ದಯಾನಂದ ಅಧ್ಯಕ್ಷತೆ ವಹಿಸಿದ್ದರು.
ಪಂದ್ಯಾವಳಿಯಲ್ಲಿ ವಿವಿಧ ಕಾಲೇಜುಗಳ 8 ತಂಡಗಳು ಭಾಗವಹಿಸಿದ್ದು, ಸೇಕ್ರೇಡ್ ಹಾರ್ಟ್ ಪದವಿ ಕಾಲೇಜು, ಮಧ್ಯಾಂತರ ಪ್ರಥಮ ಬಹುಮಾನವನ್ನು ಪಡೆದರೆ, ಮೂಡಬಿದ್ರೆ ಆಳ್ವಾಸ್ ಪದವಿ ಕಾಲೇಜು ದ್ವಿತೀಯ ಸ್ಥಾನ ಮತ್ತು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೃತೀಯ ಬಹುಮಾನ ಪಡೆದುಕೊಂಡಿತು.
ಮಂಗಳೂರು ವಿಶ್ವವಿದ್ಯಾನಿಲಯದ ಫುಟ್ಬಾಲ್ ಪಂದ್ಯದ ಸಂಚಾಲಕರು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಂ.ರಾಖಿ ಪೂವಣ್ಣ ಸ್ವಾಗತಿಸಿದರು. ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥ ಆರ್.ಮಂಜುನಾಥ ವಂದಿಸಿದರು.
ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ವಿರಾಜಪೇಟೆ ಕಾಫಿ ಬೆಳೆಗಾರ ಬಿ.ಜೆ.ಬೋಪಣ್ಣ ಮತ್ತು ವಿರಾಜಪೇಟೆ ಆಕ್ಸ್ಫರ್ಡ್ ಫುಟ್ಬಾಲ್ಕ್ಲಬ್ನ ಅಧ್ಯಕ್ಷ ರ್ಯಾನ್ಸನ್ ಚಾಕೋ ಭಾಗವಹಿಸಿದ್ದರು.
ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಎಚ್.ಎಸ್.ವೇಣುಗೋಪಾಲ್ ಸ್ವಾಗತಿಸಿದರು. ವಿಜೇತ ತಂಡಗಳಿಗೆ ಮುಖ್ಯ ಅತಿಥಿಗಳು ಟ್ರೋಫಿ ಮತ್ತು ಪ್ರಶಸ್ತಿ ಪತ್ರವನ್ನು ನೀಡಿದರು. ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬೋಧಕ, ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.