ಮಡಿಕೇರಿ ಮೇ 24 : ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕು ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಪುರ ಗ್ರಾ.ಪಂ ಗೆ ಸೇರುವ ದೇವರಪುರ ಗ್ರಾಮದಲ್ಲಿ ಶ್ರೀ ಅಯ್ಯಪ್ಪ ಮತ್ತು ಭದ್ರಕಾಳಿ ದೇವರ ಬೇಡು(ಕುಂಡೆ) ಹಬ್ಬವನ್ನು ಮೇ 25 ರಂದು ಆಚರಿಸುತ್ತಿದ್ದು, ಈ ಹಿನ್ನೆಲೆ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮೇ 24 ರ ಮಧ್ಯರಾತ್ರಿ 12 ಗಂಟೆಯಿಂದ ಮೇ 25 ರ ಮಧ್ಯರಾತ್ರಿ 12 ಗಂಟೆಯವರೆಗೆ ಗೋಣಿಕೊಪ್ಪ ಮತ್ತು ಸುತ್ತಮುತ್ತಲಿನ 10 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶಿಸಿದ್ದಾರೆ.









