ಮಡಿಕೇರಿ ಮೇ 24 : ಪ್ರಸಕ್ತ(2023-24) ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮೊ(ಡಿಎಚ್‍ಟಿಟಿ) ಕೋರ್ಸ್ ಕಲಿಕೆಗೆ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೇಟಗೇರಿ(ಕರ್ನಾಟಕ) (22 ಅಭ್ಯರ್ಥಿಗಳು), ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ(ತಮಿಳುನಾಡು) (17 ಅಭ್ಯರ್ಥಿಗಳು), ಎಸ್‍ಪಿಕೆಎಂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ-(03 ಅಭ್ಯರ್ಥಿಗಳು), ಕೇರಳ ರಾಜ್ಯದ ಕಣ್ಣೂರಿನ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ ಇಬ್ಬರು ಅಭ್ಯರ್ಥಿ ಅರ್ಜಿ ಆಹ್ವಾನಿಸಲಾಗಿದೆ.
ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರೂ.2,500 ರವರೆಗೆ ಶಿಷ್ಯ ವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2023 ರ ಜುಲೈ, 01 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೂಢೀಕೃತ ಅಂಕಗಳು ಮೆರಿಟ್ ಲೆಕ್ಕಚಾರಕ್ಕೆ ಆಧಾರವಾಗಿದೆ. ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾಯ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್ ಆಹ್ವಾನಿಸಲಾಗುತ್ತದೆ.
ಹೆಚ್ಚಿನ ವಿವರಗಳಿಗೆ ಮತ್ತು ಅರ್ಜಿ ಫಾರಂಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೇಟಗೇರಿ ದೂ.ಸಂ.08372-297221 ಮೊಬೈಲ್ ಸಂಖ್ಯೆ 9448644074 ಅಥವಾ ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಕಟ್ಟಡ(ಡಿಐಸಿ), ಕೊಹಿನೂರು ರಸ್ತೆ, ಮಡಿಕೇರಿ ದೂ.ಸಂ.08272-220365 ನ್ನು ಸಂಪರ್ಕಿಸಬಹುದು.
ಅರ್ಜಿಯನ್ನು ಆನ್‍ಲೈನ್‍ನಲ್ಲಿ https://khtigadag.ac.in/AdmissionForm.pdf ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು. ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟ್ಟಗೇರಿ-502102 ಇವರಿಗೆ ಮೇ, 31 ರೊಳಗೆ ಸಲ್ಲಿಸಬೇಕು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ತಿಳಿಸಿದ್ದಾರೆ.
Breaking News
- *ಬಾಳುಗೋಡುವಿನಲ್ಲಿ ಕೊಡವ ನಮ್ಮೆ ಉದ್ಘಾಟನೆ*
- *ಸುಂಟಿಕೊಪ್ಪ : ಸಂತಮೇರಿ ಆಂಗ್ಲ ಮಾಧ್ಯಮ ಶಾಲೆಯ ಎನ್ಸಿಸಿ ಕೆಡೆಟ್ಗಳಿಂದ ಸ್ವಚ್ಛತಾ ಶ್ರಮದಾನ*
- *ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ದೇವು ಆಯ್ಕೆ*
- *ಕೊಡಗು ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ವಾರ್ಷಿಕ ಮಹಾಸಭೆ*
- *ವಿರಾಜಪೇಟೆ : ನೂತನ ರಸ್ತೆ ಕಾಮಗಾರಿಗೆ ಚಾಲನೆ*
- *ಅಪ್ಪಂಗಳ ಭಾರತೀಯ ಸಂಬಾರ ಬೆಳೆಗಳ ಸಂಶೋಧನ ಸಂಸ್ಥೆಯಲ್ಲಿ ಬೆಳೆಗಾರರಿಗೆ ಕಾಳುಮೆಣಸಿನ ತರಬೇತಿ ಕಾರ್ಯಕ್ರಮ*
- *ಮಡಿಕೇರಿ ಆಟೋ ಮಾಲೀಕ-ಚಾಲಕರ ಸಂಘದ ಕುಂದು ಕೊರತೆ ಸಭೆ*
- *ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*
- *ಅದವಿಯಾಗೆ ಅಭಿನಂದನೆ*
- *ನಿಧನ ಸುದ್ದಿ*