ಮಡಿಕೇರಿ ಮೇ 25 : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಯುವ ಹೋರಾಟಗಾರ ಬೊಳ್ಳಜಿರ ಅಯ್ಯಪ್ಪ ಅವರನ್ನು ಆಯ್ಕೆ ಮಾಡುವಂತೆ ಕರ್ನಾಟಕ ಭಾಷಾ ಅಲ್ಪಸಂಖ್ಯಾತರ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರತೀಕ್ ಪೊನ್ನಣ್ಣ ಮನವಿ ಮಾಡಿದ್ದಾರೆ.
ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರಿಗೆ ಮನವಿ ಸಲ್ಲಿಸಿ ಕರ್ನಾಟಕ ಭಾಷಾ ಅಲ್ಪಸಂಖ್ಯಾತರಾದ ಕೊಡವ ಭಾಷೆ ಮತ್ತು ಲಿಪಿ ಹಾಗೂ ಸಾಹಿತ್ಯದ ಬಗ್ಗೆ ಅಪಾರ ಗೌರವ ಮತ್ತು ಇದರ ಪರ ಹೋರಾಟ ಮಾಡುತ್ತಿರುವ ಬೊಳ್ಳಜಿರ ಅಯ್ಯಪ್ಪ ಅವರು, ಕರ್ನಾಟಕ ಸಾಹಿತ್ಯ ಅಕಾಡೆಮಿಗೆ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.