ಮಡಿಕೇರಿ ಮೇ 25 : ಸೋಮವಾರಪೇಟೆ ಪಟ್ಟಣ ಪಂಚಾಯಿತಿಯ ಮೊದಲ ಅವಧಿಯ ಎರಡೂವರೆ ವರ್ಷಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಧಿಕಾರವಧಿ ಮೆ.8ಕ್ಕೆ ಮುಗಿದಿದ್ದು, ಸರ್ಕಾರ ಆಡಳಿತಾಧಿಕಾರಿಯನ್ನು ನೇಮಿಸಿ ಆದೇಶ ಹೊರಡಿಸಿದೆ.
ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರ್ ಎಸ್.ವಿ.ನರಗುಂದ ಅಧಿಕಾರ ವಹಿಸಿಕೊಂಡಿದ್ದಾರೆ. ಮುಂದಿನ ಎರಡೂವರೆ ವರ್ಷಕ್ಕೆ ಅಧ್ಯಕ್ಷರ, ಉಪಾಧ್ಯಕ್ಷರ ಮೀಸಲಾತಿಯ ಆದೇಶವನ್ನು ಸರ್ಕಾರ ಹೊರಡಿಸಬೇಕಾಗಿದೆ.
ಪಂಚಾಯಿತಿಯ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿಸಿಎಂ(ಎ) ಮೀಸಲಾತಿ ಬಂದಿದ್ದು, ಬಿಜೆಪಿಯ ನಳಿನಿಗಣೇಶ್ ಅಧ್ಯಕ್ಷರಾಗಿ, ಕಾಂಗ್ರೆಸ್‍ನ ಬಿ.ಸಂಜೀವ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕೋವಿಡ್ ಸಂದರ್ಭದಲ್ಲಿ ನಳಿನಿ ಮೃತಪಟ್ಟ ನಂತರ ಪಿ.ಕೆ.ಚಂದ್ರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.









