ಮಡಿಕೇರಿ ಮೇ.25 : ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಗ್ರಾಮ ಪಂಚಾಯಿತಿಯಲ್ಲಿ “ಆರೋಗ್ಯ ಅಮೃತ ಅಭಿಯಾನದಡಿ” ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಗೋಣಿಕೊಪ್ಪಲು ಗ್ರಾ.ಪಂ ಅಧ್ಯಕ್ಷರಾದ ಸೌಮ್ಯ ಬಾಲು ಚಾಲನೆ ನೀಡಿದರು.
ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯನಿರ್ವಹಿಸುವ ಕೂಲಿ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆಯನ್ನು ಕೈಗೊಂಡಿದ್ದು, ಇಂದಿನ ಆರೋಗ್ಯ ಶಿಬಿರದಲ್ಲಿ ಪ್ರಮುಖವಾಗಿ, ರಕ್ತ ಪರೀಕ್ಷೆ ಕೈಗೊಂಡು ಮಧುಮೇಹ, ರಕ್ತದೊತ್ತಡ, ಟಿಬಿ, ಕಣ್ಣಿನ ಪರೀಕ್ಷೆ, ಹೃದಯ ಸಂಬಂಧಿಸಿದಂತೆ ಆರೋಗ್ಯ ಶಿಬಿರದಲ್ಲಿ ತಪಾಸಣೆ ಕೈಗೊಳ್ಳಲಾಯಿತು.
ಇದೇ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರಾದ ಶ್ರೀನಿವಾಸ್, ತಾಲ್ಲೂಕು ಐಇಸಿ ಸಂಯೋಜಕರಾದ ನರೇಂದ್ರ, ತಾಲ್ಲೂಕು ಆರೋಗ್ಯ ಸಂಯೋಜಕರಾದ ಅನಿತಾ, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಗೂ ಇತರರು ಉಪಸ್ಥಿತರಿದ್ದರು.







