ಮಡಿಕೇರಿ ಮೇ 25 : ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು ಮತ್ತು ಕೊಡವರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಧರಣಿ ಸತ್ಯಾಗ್ರಹ ನಡೆಸಿದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ, ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ನೂತನ ಸರ್ಕಾರಕ್ಕೆ ಸಲ್ಲಿಸಿದೆ.
ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದ ಪ್ರಮುಖರು ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಪರ ಘೋಷಣೆಗಳನ್ನು ಕೂಗಿದರು.
ಕೊಡವರ ನ್ಯಾಯ ಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ 33 ವರ್ಷಗಳಿಂದ ಸಿಎನ್‌ಸಿ ಸಂಘಟನೆ ಶಾಂತಿಯುತ ಹೋರಾಟಗಳನ್ನು ನಡೆಸಿಕೊಂಡು ಬಂದಿದೆ. ಆದರೆ ನಮ್ಮ ನೋವಿಗೆ ಸೂಕ್ತ ಸ್ಪಂದನೆ ನೀಡುವ ಕಾರ್ಯವನ್ನು ಯಾವ ಆಡಳಿತ ವ್ಯವಸ್ಥೆಯೂ ಮಾಡಿಲ್ಲ. ಇದೀಗ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ನೂತನ ಸರ್ಕಾರ ಹಾಗೂ ಜಿಲ್ಲೆಯ ಇಬ್ಬರು ಶಾಸಕರು ಬೇಡಿಕೆಗಳಿಗೆ ಸ್ಪಂದಿಸಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ನಾಚಪ್ಪ ತಿಳಿಸಿದರು.
ಒಟ್ಟು 9 ಬೇಡಿಕೆಗಳ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುoಡೇ ಗೌಡರ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.
ಈಶಾನ್ಯ ಭಾರತದಲ್ಲಿ ಅಸ್ತಿತ್ವದಲ್ಲಿರುವ 10 ಸ್ವಾಯತ್ತ ಪ್ರದೇಶಗಳು/ಪ್ರಾದೇಶಿಕ ಕೌನ್ಸಿಲ್‌ಗಳ ಮತ್ತು ಲೇಹ್ ಹಾಗೂ ಲಡಾಖ್ ಸ್ವಾಯತ್ತ ಪ್ರದೇಶಗಳ ಸಾಲಿನಲ್ಲಿ ಕರ್ನಾಟಕದ ಸ್ವಾಯತ್ತತೆಯೊಳಗೆ ಸಂವಿಧಾನದಡಿಯಲ್ಲಿ ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕ ರಾಜಕೀಯ ಸ್ವಯಂ ನಿರ್ಣಯದ ಹಕ್ಕುಗಳನ್ನು ಭಾರತದ ಸಂವಿಧಾನ ಪರಮಾರ್ಶೆ ಆಯೋಗದ ಶಿಫಾರಸ್ಸಿನಂತೆ ಜಾರಿ ಮಾಡಲು ಕ್ರಮ ಕೈಗೊಳ್ಳಬೇಕು.
ಕೊಡಗಿನ ಆದಿಮ ಸಂಜಾತ ಮೂಲನಿವಾಸಿ ಕೊಡವ ಜನಾಂಗವನ್ನು ಸಂವಿಧಾನದ ಶೆಡ್ಯೂಲ್ ಪಟ್ಟಿಯಲ್ಲಿ ಸೇರಿಸಬೇಕು. ಕೊಡವರನ್ನು ಬುಡಕಟ್ಟು ಪಟ್ಟಿಗೆ ಸೇರಿಸಲು ನ್ಯಾಯಾಲಯದ ಆದೇಶದಂತೆ ಕೊಡವ ಜನಾಂಗದ ಸಮಗ್ರ ಕುಲಶಾಸ್ತç ಅಧ್ಯಯನವನ್ನು ನ್ಯಾಯಯುತ ಮತ್ತು ಸಮಗ್ರ ರೀತಿಯಲ್ಲಿ ಪುನರಾಂಭಿಸಬೇಕು.
ಕೊಡವ ಕಸ್ಟಮರಿ/ಸಾಂಪ್ರದಾಯಿಕ ಜನಾಂಗೀಯ “ಸಂಸ್ಕಾರ ಗನ್” ಹಕ್ಕುಗಳನ್ನು ಸಿಖ್ಖರ “ಕಿರ್ಪಾನ್” ಗೆ ಸಮಾನವಾಗಿ ಸಂವಿಧಾನದ 25 ಮತ್ತು 26 ನೇ ವಿಧಿಗಳಡಿಯಲ್ಲಿ ರಕ್ಷಿಸಬೇಕು. ಮಾತೃಭಾಷೆ ಕೊಡವ ತಕ್ಕ್ ಅನ್ನು ಸಂವಿಧಾನದ 8ನೇ ಶೆಡ್ಯೂಲ್‌ಗೆ ಸೇರಿಸಬೇಕು. ಸಂವಿಧಾನದ 347, 350, 350ಂ ಮತ್ತು 350ಬಿ ವಿಧಿಗಳಡಿಯಲ್ಲಿ ಪಠ್ಯಕ್ರಮ ಮತ್ತು ಆಡಳಿತದಲ್ಲಿ ಕೊಡವ ತಕ್ ಅನ್ನು ಪರಿಚಯಿಸಬೇಕು.
ನಯನ ಮನೋಹರವಾದ ಕೊಡವ ಜಾನಪದ ಪರಂಪರೆಯನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಯಲ್ಲಿ ಸೇರಿಸಬೇಕು. ಕೊಡವ ಜಾನಪದ ಪರಂಪರೆಯನ್ನು ಜೀವಂತಗೊಳಿಸಲು, ವಿಶ್ವ ಕೊಡವಾಲಜಿ/ಕೊಡವ ಶಾಸ್ತ್ರದ ಜಾಗತಿಕ ಸಂಶೋಧನಾ ಕೇಂದ್ರ ಮತ್ತು ಕೊಡವ ಸುಧಾರಿತ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲು ಸರ್ಕಾರ ಭೂಮಿಯನ್ನು ನೀಡಬೇಕು.
ವೇದ ಕಾಲದ 7 ಪವಿತ್ರ ನದಿಗಳಲ್ಲಿ ಒಂದಾಗಿರುವ ಜೀವನದಿ ಕಾವೇರಿಗೆ “ಕಾನೂನಾತ್ಮಕ ವ್ಯಕ್ತಿಯ ಸ್ಥಿತಿ”ಯೊಂದಿಗೆ ಜೀವಂತ ಘಟಕವನ್ನು ನೀಡಬೇಕು. ಜಲದೇವತೆ ಕಾವೇರಿಯ ಜನ್ಮಸ್ಥಳವನ್ನು ಯಹೂದಿ ಜನರ ಮೌಂಟ್ ಮೊರೈಯಾ ದೇವನೆಲೆಯ ಮಾದರಿಯಲ್ಲಿ ಕೊಡವ ಜನಾಂಗದ ಪವಿತ್ರ ತೀರ್ಥಯಾತ್ರೆ ಕೇಂದ್ರವಾಗಿ ಸರ್ಕಾರ ಪರಿಗಣಿಸಬೇಕು. 1966 ರ ಹೆಲ್ಸಿಂಕಿ ನಿಯಮದ ಪ್ರಕಾರ ಕಾವೇರಿಯ ಪ್ರಮುಖ ನೀರಿನ ಪಾಲನ್ನು ಮಡಿಕೇರಿಯಲ್ಲಿ ಬಳಸಿಕೊಳ್ಳಬೇಕು. ಕಾವೇರಿ ನೀರಿನ 740 ಟಿಎಂಸಿ ವಾರ್ಷಿಕ ಇಳುವರಿಯಲ್ಲಿ, ಕೊಡಗು ಮತ್ತು ಕೊಡವರ ಉತ್ಪಾದನೆ 200 ಟಿಎಂಸಿ ಗಿಂತ ಅಧಿಕ. ಕಾವೇರಿ ನೀರಿನ ಸಿಂಹ ಪಾಲನ್ನು ಹೆಲ್ಸಿಂಕಿ ರೂಲ್ಸ್ 1966ರನ್ವಯ ಕೊಡಗು ಬಳಸುವಂತಾಗಬೇಕು ಮತ್ತು ಅದರ ರಾಜಧನ ನಮಗೆ ಧಕ್ಕಬೇಕು.
ನಾಲ್ನಾಡ್ ಅರಮನೆ ಮತ್ತು ಮಡಿಕೇರಿ ಕೋಟೆಯಲ್ಲಿನ ಅರಮನೆಯ ಸಂಚಿನಲ್ಲಿನ ಮುಗ್ಧ ಕೊಡವರ ರಾಜಕೀಯ ಹತ್ಯೆಗಳ ಸ್ಮಾರಕಗಳು ನಿರ್ಮಾಣವಾಗಬೇಕು. 32 ಬಾರಿ ಹೈದರ್ ಮತ್ತು ಟಿಪ್ಪುವನ್ನು ಹಿಮ್ಮೆಟ್ಟಿಸಿದ ಕೊಡವ ಶೌರ್ಯವನ್ನು ಪ್ರತಿಬಿಂಬಿಸುವ ಉಲುಗುಲಿ/ಸುಂಟಿಕೊಪ್ಪ ಮತ್ತು ಮುಳ್ಳುಸೋಗೆಯಲ್ಲಿ ಯುದ್ಧ ಸ್ಮಾರಕಗಳನ್ನು ಸ್ಥಾಪಿಸಬೇಕು.
ನಮ್ಮ ಸಂವಿಧಾನದ 49 ವಿಧಿ ಮತ್ತು ವೆನಿಸ್ ಘೋಷಣೆ 1964 ರಂತೆ ದೇವಾಟ್ ಪರಂನಲ್ಲಿ ಅಂತರರಾಷ್ಟ್ರೀಯ ಕೊಡವ ನರಮೇಧ ದುರಂತ ಸ್ಮಾರಕಗಳನ್ನು ನಿರ್ಮಿಸಬೇಕು. ಮೇಲಿನ ಎರಡೂ ದುರಂತಗಳನ್ನು ವಿಶ್ವ ರಾಷ್ಟ್ರ ಸಂಸ್ಥೆಯ ಹತ್ಯಾಕಾಂಡದ ಸ್ಮರಣಾರ್ಥ ಪಟ್ಟಿಯಲ್ಲಿ ಸೇರಿಸಬೇಕು. ಪ್ರಾಚೀನ ಕೊಡವ ಸಮರ ರಂಗ ಹಾಗೂ ದೇಶ ಮಂದ್ ಆಗಿರುವ ದೇವಾಟ್ ಪರಂಬನ್ನು ವಿಶ್ವ ದರ್ಜೆಯ ಸಮರ ರಂಗಗಳಾದ ಕುರುಕ್ಷೇತ್ರ, ಕಳಿಂಗ ಮತ್ತು ವಾರ‍್ಲುಗೆ ಸರಿ ಸಮಾನವಾಗಿ ಪಾರಂಪರಿಕ ತಾಣವಾಗಿ ಸಂರಕ್ಷಿಸಬೇಕು.
ಜನಸoಖ್ಯಾ ಬದಲಾವಣೆಯನ್ನು ತಡೆಗಟ್ಟಲು, ನಮ್ಮ ಆನುವಂಶಿಕ ಪೂರ್ವಾರ್ಜಿತ ಸಮುದಾಯಿಕ ಆಸ್ತಿಗಳನ್ನು ಮತ್ತು ನಮ್ಮ ಆಧ್ಯಾತ್ಮಿಕ- ಪರಮಾರ್ಥಿಕ ಸ್ಥಾನಗಳಾದ ಮಂದ್, ದೇವಕಾಡ್, ತೂಟ್‌ಂಗಲ, ಕ್ಯಾಕೋಲಾ, ದೇವಕಾಡ್ ಇತ್ಯಾದಿ ಭೂಮಿಯಲ್ಲಿ ನಮ್ಮ ಐತಿಹಾಸಿಕ ನಿರಂತರತೆಗೆ ಶಾಸನಬದ್ಧ ಅನುಮೋದನೆಗಾಗಿ ಸಿಎನ್‌ಸಿ/ಕೊಡವ ನ್ಯಾಷನಲ್ ಕೌನ್ಸಿಲ್ ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ ಮತ್ತು ಮಿಜೋರಾಂನ ಸಾಲುಗಳ ಮಾದರಿಯಲ್ಲಿ ಇನ್ನರ್‌ಲೈನ್ ಪರ್‌ಮಿಟ್ (ಐಎಲ್‌ಪಿ) ಮತ್ತು “ಸೆಂಟ್ರಲ್ ವಿಸ್ತಾ” ಹೊಸ ಸಂಸತ್ತಿನಲ್ಲಿ ಕೊಡವ ಪ್ರಾತಿನಿಧ್ಯವನ್ನು ನೀಡಬೇಕು ಎಂದು ನಾಚಪ್ಪ ಒತ್ತಾಯಿಸಿದರು.
ಸಿಎನ್‌ಸಿ ಪ್ರಮುಖರಾದ ಪಟ್ಟಮಾಡ ಲಲಿತ ಗಣಪತಿ, ಕಲಿಯಂಡ ಮೀನಾ ಪ್ರಕಾಶ್, ಡಾ.ನೆರವಂಡ ವೀಣಾ ಪೂಣಚ್ಚ, ಬೊಪ್ಪಂಡ ಬೊಳ್ಳಮ್ಮ, ಕೂಪದಿರ ಪುಷ್ಪ ಮುತ್ತಣ್ಣ, ಅಪ್ಪಚ್ಚಿರ ರೀನ ನಾಣಯ್ಯ, ಕಲಿಯಂಡ ಪ್ರಕಾಶ್, ಅಪ್ಪಚ್ಚಿರ ರಮ್ಮಿ ನಾಣಯ್ಯ, ಪಟ್ಟಮಾಡ ಕುಶ, ಬಾಚರಣಿಯಂಡ ಚಿಪ್ಪಣ್ಣ, ಅಜ್ಜಿಕುಟ್ಟಿರ ಲೋಕೇಶ್, ಚಂಬoಡ ಜನತ್, ಬೊಟ್ಟಂಗಡ ಗಿರೀಶ್, ಬೇಪಡಿಯಂಡ ಬಿದ್ದಪ್ಪ, ಜಮ್ಮಡ ಮೋಹನ್, ಅಪ್ಪೆಂಗಡ ಮಾಲೆ, ಕಾಂಡೆರ ಸುರೇಶ್, ಕಿರಿಯಮಾಡ ಶರೀನ್, ಬೇಪಡಿಯಂಡ ದಿನು, ಅರೆಯಡ ಗಿರೀಶ್, ಅಪ್ಪರಂಡ ಪ್ರಸಾದ್, ಪುಟ್ಟಿಚಂಡ ದೇವಯ್ಯ, ಮಣವಟ್ಟಿರ ಚಿಣ್ಣಪ್ಪ, ಮಣವಟ್ಟಿರ ಜಗದೀಶ್, ಮಣವಟ್ಟಿರ ಶಿವಣಿ, ನಂದಿನೆರವoಡ ವಿಜು, ನಂದಿನೆರವoಡ ಅಪ್ಪಯ್ಯ, ನಂದಿನೆವAಡ ಅಯ್ಯಣ್ಣ, ಮಣವಟ್ಟಿರ ಜೀವಿತ್ ಬೊಳ್ಯಪ್ಪ, ಮಣವಟ್ಟಿರ ಉತ್ತಮ್ ಅಯ್ಯಪ್ಪ, ಅಜ್ಜಿನಿಕಂಡ ಸನ್ನಿ ಮಾಚಯ್ಯ ಧರಣಿಯಲ್ಲಿ ಪಾಲ್ಗೊಂಡಿದ್ದರು.
Breaking News
- *ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ*
- *ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅಲುಫ್ ಎ.ಆರ್ ಚಾಂಪಿಯನ್*
- *ಮಡಿಕೇರಿಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ : ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಿ: ಸಿವಿಲ್ ನ್ಯಾಯಾಧೀಶೆ ಶುಭ*
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*