ಮಡಿಕೇರಿ ಮೇ 25 : ಅಭಿವೃದ್ಧಿಯ ಹೆಸರಿನಲ್ಲಿ ಹಣ ಕೊಳ್ಳೆ ಹೊಡೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲವೆಂದು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.
ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾಭವನದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಸರಕಾರಿ ಇಲಾಖೆಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಲಾಗುವುದು ಮತ್ತು ಸಾರ್ವಜನಿಕರ ಕೆಲಸಗಳು ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಲಾಗುವುದು ಎಂದರು.
ಜನಪರವಾದ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭಿವೃದ್ಧಿಯ ಹೆಸರಿನಲ್ಲಿ ಹಣ ದುರುಪಯೋಗ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ. ಜನರ ಕಷ್ಟಗಳಿಗೆ ಸಕಾಲದಲ್ಲಿ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲೆಯಲ್ಲಿ ಮುಂಗಾರು ಆರಂಭಗೊಳ್ಳಲಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆ ಕರೆಯುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಡ್ರಗ್ಸ್ ದಂಧೆ ವಿರುದ್ಧ ಕಠಿಣ ಕ್ರಮ ಮತ್ತು ಕಾನೂನು ಬಾಹಿರ ಕೃತ್ಯಗಳಿಗೆ ಕಡಿವಾಣ ಹಾಕಲು ಈಗಾಗಲೇ ಮುಖ್ಯಮಂತ್ರಿಗಳು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಕೊಡಗು ಜಿಲ್ಲೆಯಲ್ಲಿಯೂ ಸೂಕ್ತ ಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.
ಸಿದ್ದಾಪುರ ಕಸವಿಲೇವಾರಿ ಸಮಸ್ಯೆಗೆ ಪರಿಹಾರ, ಗೋಣಿಕೊಪ್ಪದಲ್ಲಿ ಬಸ್ ನಿಲ್ದಾಣ ನಿರ್ಮಾಣ, ಭಾಗಮಂಡಲ ಮೇಲು ಸೇತುವೆ ಕಾಮಗಾರಿ ಪೂರ್ಣಗೊಳಿಸುವುದು, ಪ್ರಾಕೃತಿಕ ವಿಕೋಪ ಸಂತ್ರಸ್ತರಿಗೆ ಮನೆಗಳ ವಿತರಣೆ, ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು, ತಜ್ಞರ ಸಲಹೆ ಪಡೆದು ಮಾನವ- ವನ್ಯಜೀವಿ ಸಂಘರ್ಷಕ್ಕೆ ಕಡಿವಾಣ ಹಾಕಲಾಗುವುದು ಎಂದು ಭರವಸೆ ನೀಡಿದ ಪೊನ್ನಣ್ಣ, ಜಿಲ್ಲೆಯ ಜನರ ಧ್ವನಿಯಾಗಿ ವಿಧಾನಸಭೆಯಲ್ಲಿ ಕೆಲಸ ಮಾಡುವುದಾಗಿ ಹೇಳಿದರು.
ಸಚಿವ ಸಂಪುಟ ರಚನೆಯಾದ ಬಳಿಕ ಗ್ಯಾರಂಟಿ ಯೋಜನೆಗಳು ಜಾರಿಗೆ ಬರಲಿವೆ. ಎಲ್ಲರೂ ಆರ್ಥಿಕ ಪ್ರಗತಿ ಸಾಧಿಸಬೇಕು, ನಾವು ನೀಡುವ ಎರಡು ಸಾವಿರ ರೂಪಾಯಿಗಳಲ್ಲಿ ಜೀವನ ನಿರ್ವಹಣೆ ಅಸಾಧ್ಯ. ಆದರೆ ದುಡಿಯುವ ಹೆಣ್ಣು ಮಗಳೊಬ್ಬಳು ಅನಿವಾರ್ಯ ಕಾರಣಗಳಿಂದ ಕೆಲಸಕ್ಕೆ ಹೋಗಲಾಗದಿದ್ದಲ್ಲಿ ಅಂತಹ ಸಂದರ್ಭದಲ್ಲಿ ಈ ಎರಡು ಸಾವಿರ ರೂ. ಆಕೆಯಲ್ಲಿ ಆರ್ಥಿಕ ಭದ್ರತೆಯನ್ನು ಮೂಡಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ಕೊಡಗು ಪ್ರೆಸ್ ಕ್ಲಬ್‌ನ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿಯ ಅಧ್ಯಕ್ಷ ಡಾ.ಉಳ್ಳಿಯಡ ಎಂ. ಪೂವಯ್ಯ ಮಾತನಾಡಿದರು. ಬೆಳ್ಳಿ ಮಹೋತ್ಸವ ಆಚರಣಾ ಸಮಿತಿಯ ಗೌರವ ಅಧ್ಯಕ್ಷೆ ಸವಿತಾ ರೈ, ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ಹಾಗೂ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ ಉಪಸ್ಥಿತರಿದ್ದರು.
Breaking News
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*
- *ವೀರ ಸೇನಾನಿಗಳಿಗೆ ಅಗೌರವ : ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆ ಖಂಡನೆ : ಆರೋಪಿಯ ಗಡಿಪಾರಿಗೆ ಆಗ್ರಹ*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶ*
- *ನ.29ರಂದು ಕೊಡಗು ಜಿಲ್ಲಾ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆಯ 12ನೇ ವಾರ್ಷಿಕ ಮಹಾಸಭೆ*
- *ನ.30 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಮತ್ತು ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ*
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*