ಮಡಿಕೇರಿ ಮೇ 26 : ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು. ಇದರಿಂದ ಜನಪ್ರತಿನಿಧಿಗಳು ಜನರ ನಿರೀಕ್ಷೆಗೆ ತಕ್ಕಂತೆ ಹೆಚ್ಚು ಕೆಲಸ ಮಾಡಲು ಸಾಧ್ಯ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹೇಳಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬoಧಿಸಿದoತೆ ಅಭಿವೃದ್ಧಿ ಕಾರ್ಯಗಳು ಹಾಗೂ ಸಾರ್ವಜನಿಕರಿಗೆ ಸ್ಪಂದಿಸಬೇಕಾದ ಕೆಲಸಗಳ ಬಗ್ಗೆ ಶುಕ್ರವಾರ ನಡೆದ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.
ಚುನಾವಣೆ ಸಂದರ್ಭದಲ್ಲಿ ನೀಡಲಾಗಿದ್ದ ಭರವಸೆಯ ಪ್ರಣಾಳಿಕೆಯನ್ನು ಈಡೇರಿಸಲು ಸಂಬoಧಪಟ್ಟ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರಣಾಳಿಕೆಯಲ್ಲಿ ಜನಪರ ಕಾರ್ಯಕ್ರಮಗಳು ಇದ್ದು, ಅವುಗಳನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳು ಮುಂದಾಗಬೇಕು. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಹಾಗೂ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಎಲ್ಲಾ ಹಂತದ ಅಧಿಕಾರಿಗಳು ಕೈಜೋಡಿಸಬೇಕು ಎಂದು ನೂತನ ಶಾಸಕರು ತಿಳಿಸಿದರು.
ಸರ್ಕಾರದ ವಿವಿಧ ಕಾಮಗಾರಿಗಳಿಗೆ ಸಂಬoಧಿಸಿದoತೆ ಇತ್ತೀಚೆಗೆ ಹೊಸ ಆದೇಶ ಹೊರಡಿಸಿದ್ದು, ಈಗಾಗಲೇ ಪೂರ್ಣವಾಗಿರುವ ಕಾಮಗಾರಿಗಳಿಗೆ ಹಣ ಬಿಡುಗಡೆಗೆ ಬಾಕಿ ಇದ್ದಲ್ಲಿ, ಪಟ್ಟಿಯನ್ನು ಒದಗಿಸಬೇಕು. ಸರ್ಕಾರದ ಆದೇಶವನ್ನು ಪಾಲಿಸಬೇಕೆಂದರು.
ಭಾಗಮಂಡಲ ಮೇಲು ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅವಕಾಶ ಮಾಡುವಂತೆ ಸಂಬoಧಪಟ್ಟ ಎಂಜಿನಿಯರ್‌ಗೆ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸೂಚಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ಕಾವೇರಿ ನೀರಾವರಿ ನಿಗಮದ ಎಇಇ ನವೀನ್ ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಅಧಿಕಾರಿಗಳು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಸಮಸ್ಯೆಗಳು ಇದ್ದಲ್ಲಿ ಮುಕ್ತವಾಗಿ ಹಂಚಿಕೊಳ್ಳಬೇಕು. ಯಾವುದೇ ಮುಜುಗರ ಅಥವಾ ಹಿಂಜರಿಯಬಾರದು ಎಂದು ಅಧಿಕಾರಿಗಳಿಗೆ ಶಾಸಕರು ಹೇಳಿದರು.
ಕೊಯನಾಡು ಬಳಿ ಕಿಂಡಿ ಅಣೆಕಟ್ಟಿನಲ್ಲಿ ಪ್ರವಾಹ ಸಂದರ್ಭದಲ್ಲಿ ಮರದ ದಿಮ್ಮಿಗಳು ಸಂಗ್ರಹವಾಗುತ್ತಿದ್ದು, ಇದರಿಂದ ಪ್ರವಾಹ ಉಂಟಾಗಿ ಅಲ್ಲಿನ ಕುಟುಂಬಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾಹಿತಿ ಇದೆ. ಸ್ಥಳೀಯರಿಗೆ ತೊಂದರೆಯಾಗದoತೆ ಗಮನಹರಿಸಬೇಕು ಎಂದು ಅವರು ಹೇಳಿದರು.
ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಕೊಯನಾಡು ಬಳಿ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದೆ. ಹೆಚ್ಚಿನ ಮಳೆ ಸಂದರ್ಭದಲ್ಲಿ ಮರದ ದಿಮ್ಮಿಗಳು ಸಂಗ್ರಹವಾಗಿ ಅಲ್ಲಿನ ಕುಟುಂಬಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಈ ಬಗ್ಗೆ ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್‌ಗಳು ಗಮನಹರಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.
ಜಲಜೀವನ್ ಮಿಷನ್ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ದೇವನಗೇರಿ ಕಾಲೋನಿ ಹಾಗೂ ಟಿ.ಶೆಟ್ಟಿಗೇರಿ ಸೇರಿದಂತೆ ಹಲವು ಕಡೆಗಳಲ್ಲಿ ಕುಡಿಯುವ ನೀರು ಸಂಪರ್ಕ ಕಲ್ಪಿಸುವಂತೆ ಸಂಬoಧಪಟ್ಟ ಎಂಜಿನಿಯರ್‌ಗೆ ಎ.ಎಸ್.ಪೊನ್ನಣ್ಣ ಸೂಚಿಸಿದರು.
ಹಾಡಿಗಳಲ್ಲಿ ವಾಸಿಸುವ ಜನರಿಗೆ ನಿವೇಶನ ಕಲ್ಪಿಸುವ ನಿಟ್ಟಿನಲ್ಲಿ ಮುಂದಾಗಬೇಕು. ಆ ನಿಟ್ಟಿನಲ್ಲಿ ಜಾಗ ಗುರುತಿಸುವಂತಾಗಬೇಕು ಎಂದು ಶಾಸಕರು ಹೇಳಿದರು.
ವಿರಾಜಪೇಟೆಯ ಪದವಿ ಪೂರ್ವ ಕಾಲೇಜಿನಲ್ಲಿ ಶೌಚಾಲಯ ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಕಳೆದ ಎರಡು ವರ್ಷದಿಂದ ಕಾಮಗಾರಿ ಸ್ಥಗಿತಗೊಂಡಿದ್ದು, ತುರ್ತು ಕ್ರಮವಹಿಸುವಂತೆ ಸಂಬoಧಪಟ್ಟ ಎಂಜಿನಿಯರ್‌ಗೆ ಶಾಸಕರು ಸೂಚಿಸಿದರು.
ನದಿ ದಡದಲ್ಲಿ ವಾಸಿಸುವ ಜನರನ್ನು ಸ್ಥಳಾಂತರಕ್ಕೆ ಕ್ರಮವಹಿಸುವಂತೆ ಶಾಸಕರು ಹೇಳಿದರು. ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಗುಹ್ಯ, ಸಿದ್ದಾಪುರ, ಕರಡಿಗೋಡಿನಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಬೇಕಿದೆ. ಅಲ್ಲಿನ ಜನರು 5-6 ಕಿ,ಮೀ. ದೂರದಲ್ಲಿದ್ದರೆ ತೆರಳುವುದಿಲ್ಲ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಗ್ರಾ.ಪಂ.ನಲ್ಲಿ ನಿರ್ಧಾರ ಮಾಡಿ, ಹತ್ತಿರದಲ್ಲಿ ನಿವೇಶನ ಕಲ್ಪಿಸಬೇಕಿದೆ ಎಂದರು.
ಪೊನ್ನoಪೇಟೆ ಕ್ರೀಡಾ ವಸತಿ ಶಾಲೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಉಳಿಸಿಕೊಂಡು ಕೊಡಗು ಜಿಲ್ಲೆಯ ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಮಾಡಬೇಕು. ಆದ್ದರಿಂದ ಈ ಹಿಂದೆ ಇದ್ದಂತೆ ಸ್ಥಳೀಯ ವಿದ್ಯಾರ್ಥಿಗಳಿಗೆ ಅವಕಾಶ ಮಾಡಬೇಕು ಎಂದು ಅಧಿಕಾರಿಗೆ ಸೂಚಿಸಿದರು.
ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ದೂರುಗಳು ಕೇಳಿ ಬರದಂತೆ ಎಚ್ಚರ ವಹಿಸಬೇಕು ಎಂದು ಶಾಸಕರು ಹೇಳಿದರು.
ಸಿದ್ದಾಪುರ ಗ್ರಾಮದಲ್ಲಿ ಘನತ್ಯಾಜ್ಯ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡುವಂತೆ ಅಲ್ಲಿನ ತಾ.ಪಂ.ಇಒಗೆ ಸೂಚಿಸಿದರು.
ನಾಪೋಕ್ಲು, ಶ್ರೀಮಂಗಲ ಮತ್ತಿತರ ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಬಗ್ಗೆ ದೂರುಗಳು ಕೇಳಿಬರುತ್ತಿದೆ. ಆದ್ದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದoತೆ ಗಮನಹರಿಸಬೇಕು ಎಂದು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹೇಳಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಇಒ ಹುದ್ದೆಗೆ ಸರ್ಕಾರದಿಂದ ಅನುಮತಿ ದೊರೆತಿದೆ. ಈಗಾಗಲೇ ಪೊನ್ನಂಪೇಟೆಯಲ್ಲಿ ತಾ.ಪಂ ಕಚೇರಿ ಇರುವುದರಿಂದ ವಿರಾಜಪೇಟೆಯಲ್ಲಿ ತಾ.ಪಂ.ಕಚೇರಿ ತೆರೆಯಬೇಕಿದೆ. ಈಗಾಗಲೇ ಹೊಸ ತಾಲ್ಲೂಕಿಗೆ ಹುದ್ದೆಗಳು ಮಂಜೂರಾಗಿದ್ದು, ಪೊನ್ನಂಪೇಟೆ ಮತ್ತು ವಿರಾಜಪೇಟೆಯಲ್ಲಿ ಪ್ರಭಾರದಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕಿದೆ. ನಂತರದಲ್ಲಿ ಹಂತ ಹಂತವಾಗಿ ಹುದ್ದೆಗಳು ಭರ್ತಿಯಾಗಲಿವೆ ಎಂದು ಹೇಳಿದರು.
ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಅವರು ಈಗಾಗಲೇ 95 ಬಸ್‌ಗಳು ಸಂಚರಿಸುತ್ತಿವೆ. ನಿರ್ವಾಹಕರು ಮತ್ತು ಚಾಲಕರ ಕೊರತೆ ಇದೆ. ಹಾಗೆಯೇ ವಿರಾಜಪೇಟೆಯಲ್ಲಿ ಕೆಎಸ್‌ಆರ್‌ಟಿಸಿ ಘಟಕ ನಿರ್ಮಾಣಕ್ಕೆ ಹತ್ತಿರದಲ್ಲಿ ಜಾಗ ಬೇಕಿದೆ ಎಂದರು.
ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೆಗೌಡ ಅವರು ಲೈನ್‌ಮನೆಗಳಲ್ಲಿ ವಾಸಿಸುವ ಕುಟುಂಬಗಳಿಗೆ ನಿವೇಶನ ಕಲ್ಪಿಸಬೇಕಿದೆ ಎಂದು ಶಾಸಕರ ಗಮನಕ್ಕೆ ತಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ ಕುಮಾರ್ ಅವರು ಜಿಲ್ಲೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳ ಕೊರತೆ ಇದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುoಡೇಗೌಡ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸಿದ್ದೇಗೌಡ, ಜಿ.ಪಂ.ಎoಜಿನಿಯರ್ ನಾಗೇಂದ್ರಪ್ಪ, ಪಿಎಂಜಿಎಸ್‌ವೈ ಎಂಜಿನಿಯರ್ ಪ್ರಭು, ಡಿಯುಡಿಸಿ ಅಧಿಕಾರಿ ಬಸಪ್ಪ, ಹೆದ್ದಾರಿ ವಿಭಾಗದ ಎಂಜಿನಿಯರ್ ನಾಗರಾಜು, ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ ಕುಮಾರಸ್ವಾಮಿ, ಕೆಪಿಟಿಸಿಎಲ್ ಎಂಜಿನಿಯರ್ ಮಾದೇಶ, ಸೆಸ್ಕ್ ಎಂಜಿನಿಯರ್ ಅನಿತಾ ಬಾಯಿ, ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಗೀತಾ ಇತರರು ಹಲವು ಮಾಹಿತಿ ನೀಡಿದರು.
Breaking News
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶ*
- *ನ.29ರಂದು ಕೊಡಗು ಜಿಲ್ಲಾ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆಯ 12ನೇ ವಾರ್ಷಿಕ ಮಹಾಸಭೆ*
- *ನ.30 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಮತ್ತು ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ*
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*