ಮಡಿಕೇರಿ ಮೇ 27 : ನೂತನ ರಾಜ್ಯ ಸರ್ಕಾರದ ಮಂತ್ರಿಮoಡಲ ರಚನೆಯಾಗಿದೆ, ಜಾತ್ಯತೀತ ರಾಷ್ಟ್ರ ಭಾರತದಲ್ಲಿ ಸಂವಿಧಾನದತ್ತವಾದ ಹುದ್ದೆಗಳು ಅರ್ಹತೆಯ ಆಧಾರದ ಮೇಲೆ ಹಂಚಿಕೆಯಾಗಬೇಕೆ ಹೊರತು ಜಾತಿ, ಧರ್ಮ, ಪಂಗಡಗಳ ಆಧಾರದಿಂದ ಅಲ್ಲವೆಂದು ವಕೀಲ ಕೆ.ಎಂ.ಕುಂಞ ಅಬ್ದುಲ್ಲ ಅಭಿಪ್ರಾಯಪಟ್ಟಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭ ಜಾತೀಯತೆಯ ವಿಚಾರ ಹೆಚ್ಚು ಚರ್ಚೆಗೆ ಬಂತು. ಇದೀಗ ಕೆಲವೊಂದು ಗುಂಪು, ಪಂಗಡ, ಜಾತಿಗಳು ಸಂವಿಧಾನ ದತ್ತವಾದ ಸ್ಥಾನಮಾನಗಳನ್ನು ಅರ್ಹತೆಯನ್ನಾಧರಿಸಿ ಸ್ವೀಕರಿಸದೆ ಜಾತಿ, ಧರ್ಮಗಳ ಆಧಾರದಲ್ಲಿ ಕೇಳಿ ಪಡೆಯುತ್ತಿರುವುದು ಮತ್ತು ಹಂಚಿಕೆಯಾಗುತ್ತಿರುವುದು ಕಂಡು ಬರುತ್ತಿದೆ. ಇದು ಅಕ್ಷಮ್ಯ ಅಪರಾಧವಾಗಿದೆ, ಅಲ್ಲದೆ ಸಂವಿಧಾನ ವಿರೋಧಿಯಾಗಿದೆ ಎಂದು ತಿಳಿಸಿದ್ದಾರೆ.
ಯಾವುದೇ ವ್ಯಕ್ತಿ ತಮ್ಮ ಅರ್ಹತೆ ಮತ್ತು ಪ್ರತಿಭೆಯ ಮೂಲಕ ಸಂವಿಧಾನದತ್ತವಾದ ಹುದ್ದೆಗಳನ್ನು ಪಡೆದಾಗ ಮಾತ್ರ ಭಾರತ ಜಾತ್ಯಾತೀತ ರಾಷ್ಟ್ರವಾಗಿ ಉಳಿದು ಸಂವಿಧಾನದ ಮೂಲ ಉದ್ದೇಶ ಈಡೇರುತ್ತದೆ ಎಂದು ಕುಂಞ ಅಬ್ದುಲ್ಲ ಹೇಳಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*