ಮಡಿಕೇರಿ ಮೇ 29 : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ
ಮಕ್ಕಳು ಎತ್ತಿನ ಗಾಡಿಯಲ್ಲಿ ಶಾಲೆಗೆ ಆಗಮಿಸುವ ಮೂಲಕ ಗಮನ ಸೆಳೆದರು.
ಮಕ್ಕಳು ವಿನೂತನ ರೀತಿಯಲ್ಲಿ ಶಾಲೆಗೆ ಆಗಮಿಸಿದ್ದು, ಗ್ರಾಮಸ್ಥರ ಗಮನ ಸೆಳೆಯಿತು.
ಶಾಲಾ ಪ್ರಾರಂಭೋತ್ಸವದ ಮೊದಲ ದಿನ ಶಿಕ್ಷಕರು ಶಾಲೆಗೆ ಮಕ್ಕಳನ್ನು ಭವ್ಯವಾಗಿ ಸ್ವಾಗತಿಸಿ
ಸಿಹಿ ವಿತರಿಸಿದರು.
ಜಾನಪದ ಸಂಸ್ಕೃತಿಯ ಪ್ರತೀಕವಾದ ಎತ್ತಿನ ಗಾಡಿಯನ್ನು ಏರಿದ ಮಕ್ಕಳು ಸರ್ಕಾರಿ ಶಾಲೆಗೆ ಹೋಗೋಣ ಬನ್ನಿ, ಸರ್ಕಾರಿ ಶಾಲೆ ನಮ್ಮ ಹೆಮ್ಮೆ, ಸರ್ಕಾರಿ ಶಾಲೆ ನಮ್ಮೂರ ಶಾಲೆ, ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸೋಣ ಬನ್ನಿ, ‘ಶಿಕ್ಷಣವೇ ಶಕ್ತಿ’ ಎಂಬಿತ್ಯಾದಿ ಘೋಷಣೆಗಳ ಫಲಕಗಳನ್ನು ಹಿಡಿದು ಎತ್ತಿನ ಗಾಡಿಯ ಮೂಲಕ ಸಂಭ್ರಮದಿಂದ ಶಾಲೆಗೆ ಆಗಮಿಸಿದರು.
ಗ್ರಾಮದ ಮುಖ್ಯರಸ್ತೆ ಬಳಿಯಿಂದ ಆರಂಭಗೊಂಡ ಮಕ್ಕಳ ಎತ್ತಿನ ಗಾಡಿಗೆ ಚಾಲನೆ ನೀಡಿದ ಗ್ರಾಮ
ಹಿರಿಯರೂ ಆದ ಕೃಷಿಕ ಕೆ.ಎಸ್.ರಾಜಾಚಾರಿ, ಪ್ರತಿಯೊಬ್ಬರೂ ಮಕ್ಕಳ ಶಿಕ್ಷಣಕ್ಕೆ ಸಹಕರಿಸಬೇಕು ಎಂದರು.
ಕೃಷಿಕ ಕೆ.ಆರ್.ನಾಗರಾಜ್ ಸಾರಥ್ಯದಲ್ಲಿ ಸಾಗಿದ ಎತ್ತಿನ ಗಾಡಿಯ ಮೂಲಕ ಗ್ರಾಮದ ಬೀದಿಯಲ್ಲಿ ಸಾಗಿದ ಮಕ್ಕಳು, ಮಕ್ಕಳನ್ನು ಶಾಲೆಗೆ ದಾಖಲಿಸಿ ಶಿಕ್ಷಣ ಕೊಡಿಸಿ ಎಂದು ಮನವಿ ಮಾಡಿದರು.
ಶಾಲಾ ಅಂಗಳಕ್ಕೆ ಎತ್ತಿನ ಗಾಡಿಯ ಮೂಲಕ ಆಗಮಿಸಿದ ಮಕ್ಕಳನ್ನು ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮತ್ತು ಶಿಕ್ಷಕ ವೃಂದ ಹೂ ಹಾಗೂ ಪುಸ್ತಕ ನೀಡುವ ಮೂಲಕ ಸ್ವಾಗತಿಸಿದರು.
ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಸರ್ಕಾರ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಬಿಸಿಯೂಟ ಸೌಲಭ್ಯದೊಂದಿಗೆ ವಿವಿಧ ಸವಲತ್ತುಗಳನ್ನು ನೀಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಅವರಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಮನವಿ ಮಾಡಿದರು.
ತಮ್ಮ ಶಾಲೆಗೆ ಕಳೆದ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.94 ಫಲಿತಾಂಶ ಬಂದಿದ್ದು, ಮಕ್ಕಳು ಉತ್ತಮ ಸಾಧನೆ ಮಾಡಿದ್ದಾರೆ ಎಂದರು.
ಮಕ್ಕಳಿಗೆ ಉಚಿತ ಪಠ್ಯಪುಸ್ತಕ ವಿತರಿಸಿದ ಎಸ್ ಡಿ ಎಂ ಸಿ ಅಧ್ಯಕ್ಷ ಎಸ್.ಎನ್.ಪುಟ್ಟಸ್ವಾಮಿ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಎಸ್ ಡಿ ಎಂ ಸಿ ಸದಸ್ಯ ಜವರಯ್ಯ, ಹಿರಿಯ ಕೃಷಿಕ ಕೆ.ಎಸ್.ರಾಜಾಚಾರಿ, ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ.ದಯಾನಂದ ಪ್ರಕಾಶ್, ಬಿ.ಡಿ.ರಮ್ಯ, ಎಸ್.ಎಂ.ಗೀತಾ, ಬಿ.ಎಸ್.ಅನ್ಸಿಲಾ ರೇಖಾ, ಪೋಷಕರು ಇದ್ದರು.
ಮಕ್ಕಳಿಗೆ ಸಿಹಿ ವಿತರಣೆ : ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನ ಪಾಯಸದ ಸಿಹಿಯೊಂದಿಗೆ ಬಿಸಿಯೂಟ ವಿತರಿಸಲಾಯಿತು.
ನಂತರ ಶಿಕ್ಷಕರು ಮತ್ತು ಮಕ್ಕಳು ಶಾಲಾ ಸ್ವಚ್ಛತಾ ಕಾರ್ಯ ಕೈಗೊಂಡರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*