ಮಡಿಕೇರಿ ಮೇ 30 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ವತಿಯಿಂದ ನಡೆಯುವ ಸಂಕಲ್ಪ-2023 ಕಲೋತ್ಸವದ ಲೋಗೋ ಅನಾವಣಗೊಳಿಸಲಾಯಿತು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ರಾಘವ ಬಿ. ಮತ್ತು ವಿಭಾಗ ಮುಖ್ಯಸ್ಥರಾದ ಡಾ.ಶೈಲಶ್ರೀ ಕೆ.ಲೋಗೋವನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.









