ಮಡಿಕೇರಿ ಮೇ 30 : ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ 30 ಮಂದಿ ಅಧಿಕಾರಿ ಸಿಬ್ಬಂದಿಯನ್ನೊಳಗೊಂಡ ಜಿಲ್ಲಾ ವಿಪತ್ತು ನಿರ್ವಹಣಾ ತಂಡದಿಂದ ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆ ನಡೆಸುವ ಬಗ್ಗೆ ಅಭ್ಯಾಸ ನಡೆಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನೇತೃತ್ವದಲ್ಲಿ ನಡೆದ ಅಭ್ಯಾಸ ಕಾರ್ಯಾಚರಣೆಯಲ್ಲಿ ಸೋಮವಾರಪೇಟೆ ಡಿವೈ.ಎಸ್.ಪಿ., ಕುಶಾಲನಗರ ಸಿಪಿಐ, ಮಡಿಕೇರಿ ಆರ್.ಪಿ.ಐ. ಡಿಎಆರ್ ಹಾಗೂ ಇನ್ನಿತರ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.